ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ನ್ಯಾಯಾಂಗ ಇಲಾಖೆ ದಾವಣಗೆರೆ ಜಿಲ್ಲೆ & ದಾವಣಗೆರೆ ಜಿಲ್ಲಾ ಪೊಲೀಸ್ ಸಹಕಾರದೊಂದಿಗೆ ಆಯೋಜಿಸಿದ್ದ ಕಲಂ 293 CRPC ಬಗ್ಗೆ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿದರು. ಶ್ರೀ ಜೆ.ವಿ.ವಿಜಯಾನಂದ, ಗೌರವಾನ್ವಿತ ನ್ಯಾಯಾಧೀಶರು, 1ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ, ದಾವಣಗೆರೆ ರವರು ಹಾಗೂ ಕೆ.ನಾಗರಾಜ್ ಆಚಾರ್, ನಿವೃತ್ತ ಸರ್ಕಾರಿ ಅಭಿಯೋಜಕರು ದಾವಣಗೆರೆ ರವರು ಉಪನ್ಯಾಸ ನೀಡಿದರು. ಕಾರ್ಯಾಗಾರದಲ್ಲಿ ಮಾನ್ಯ ಜಿಲ್ಲಾ ನ್ಯಾಯಾಧೀಶರುಗಳು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಆರ್.ಬಿ.ಬಸರಗಿ ರವರು, ಸರ್ಕಾರಿ ಅಭಿಯೋಜಕರು, ಕಾನೂನು ಅಧಿಕಾರಿಗಳು, ದಾವಣಗೆರೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.