ರಾಜ್ಯದಲ್ಲಿ ಕೊರೊನಾ ಎರಡನೆ ಹಳೆ ಹೆಚ್ಚುತ್ತಿರುವ ಈ ಸಮಯದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸರಿಂದ ಕೊರೊನಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು .ದಿನಾಂಕ-05-04-2021 ರಂದು ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳು, ಸಾರ್ವಜನಿಕ ಸ್ಥಳಗಳು, ಜನ ಸಂದಣಿ ಸ್ಥಳಗಳಲ್ಲಿ, ಹೋಟೆಲ್, ಮಾರುಕಟ್ಟೆಗಳಲ್ಲಿ ಭೇಟಿ ನೀಡಿ ಕೊರೊನಾ ವೈರಸ್ ನಿಂದ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಸೂಚಿಸಲಾಗಿರುತ್ತದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಅರಿವು ಮೂಡಿಸಲಾಗಿರುತ್ತದೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್