ಶೇಷಾದ್ರಿಪುರಂ ಪೊಲೀಸ್ ಠಾಣೆಯ ಸಿಬ್ಬಂದಿಗಳು ಠಾಣಾ ಸರಹದ್ದಿನ ಗಸ್ತಿನಲ್ಲಿದ್ದಾಗ, ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಒಂದು ಬಜಾಜ್ ಪಲ್ಸರ್ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು.
ಗಸ್ತಿನಲ್ಲಿದ್ದ ಪೊಲೀಸರಿಗೆ ಅನುಮಾನ ಬಂದು ಆ ವ್ಯಕ್ತಿಗಳನ್ನು ದ್ವಿ-ಚಕ್ರ ವಾಹನದ ಸಮೇತ ಠಾಣೆಗೆ ಕರೆತಂದು ದೀಘ್ರವಾಗಿ ವಿಚಾರಣೆಗೊಳಪಡಿಸಲಾಗಿ, ಅವರುಗಳು ಹಿಂದೆ ಕಳವು ಮಾಡಿದ ವಿವಿಧ ಕಂಪನಿಯ 20 ದ್ವಿ-ಚಕ್ರ ವಾಹನಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ. ಇವುಗಳ ಮೌಲ್ಯ ಒಟ್ಟು 1 25,00,000/-(ಇಪ್ಪತ್ತೈದು ಲಕ್ಷ) ರೂಗಳಾಗಿರುತ್ತದೆ.
ಈ ಪ್ರಕರಣದಲ್ಲಿ ತನಿಖೆಯನ್ನು ಮುಂದುವರಿಸಲಾಗಿ, ಈ ಇಬ್ಬರು ಆರೋಪಿಗಳು ಮತ್ತೊಬ್ಬ ಅರೋಪಿಯೊಂದಿಗೆ ಸೇರಿ ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಾದ ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದು ತನಿಖೆಯಿಂದ ದೃಢಪಟ್ಟಿರುತ್ತದೆ. ಈ ಪ್ರಕರಣದಿಂದ ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 20 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಕಾರಾಚರಣೆಯನ್ನು ಬೆಂಗಳೂರು ನಗರ ಕೇಂದ್ರ ವಿಭಾಗದ ಉಪ ಪೊಲೀಸ್ ಕಮೀಷನರ್ ಶ್ರೀ ಶೇಖರ್.ಹೆಚ್.ಟಿ ರವರ ಮಾರ್ಗದರ್ಶನದಲ್ಲಿ, ಶೇಷಾದ್ರಿಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ ಪ್ರಕಾಶ್.ಆರ್ ರವರ ನೇತೃತ್ವದಲ್ಲಿ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.