ಸೋಲದೇವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬಜಾಜ್ ಪಲ್ಲರ್-150 ದ್ವಿಚಕ್ರ ವಾಹನ ಕಳವಾಗಿರುತ್ತದೆಂದು ದಿನಾಂಕ: 17.08.2023 ರಂದು ಪಿರಾದುದಾರರು ನೀಡಿದ ದೂರಿನ ಮೇರೆಗೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ಪತ್ತೆ ಕಾರ್ಯಕೈಗೊಂಡ ಪೊಲೀಸರು ಕೃತ್ಯ ನಡೆದ ಸ್ಥಳದ ಸಮೀಪದ ಹಲವಾರು ಸಿಸಿ ಟಿವಿಗಳನ್ನು ಪರಿಶೀಲಿಸಿ, ದಿನಾಂಕ: 18,08,2023 ರಂದು 03 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ, ಅವರಿಂದ ಸುಮಾರು 12.5 ಲಕ್ಷ ರೂ ಬೆಲೆ ಬಾಳುವ 16 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಬಂಧನದಿಂದ ಸೋಲದೇವನಹಳ್ಳಿ 9, ಶಿರಾ, ತುಮಕೂರು, ನೆಲಮಂಗಲ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 13 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಪ್ರಕರಣದಲ್ಲಿ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮಾನ್ಯ ಶ್ರೀ., ಶಿವಪ್ರಕಾಶ್ ದೇವರಾಜ್ ರವರ ಮಾರ್ಗದರ್ಶನದಲ್ಲಿ, ಯಶವಂತಪುರ ಉಪವಿಭಾಗದ ಎ.ಸಿ.ಪಿ ರವರಾದ ಶ್ರೀಮತಿ
ಮೇರಿ ಶೈಲಜಾ ರವರ ನೇತೃತ್ವದಲ್ಲಿ, ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ಹರಿಯಪ್ಪ ಹೆಚ್ ರವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.