ಬಸವನಗುಡಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಾಖಲಾಗಿದ್ದ ಪ್ರತ್ಯೇಕ ದ್ವಿಚಕ್ರ ವಾಹನ ಕಳ್ಳತನ ಮತ್ತು ಒಂಟಿಯಾಗಿ ಓಡಾಡುತ್ತಿದ್ದ ಜನರಿಂದ ಮೊಬೈಲ್‌ಗಳನ್ನು ಸುಲಿಗೆ ಮಾಡುತ್ತಿದ್ದ ಪ್ರಕರಣಗಳ ತನಿಖಾ ಸಮಯದಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ, ಆವರುಗಳಿಂದ ಒಟ್ಟು 11 ದ್ವಿಚಕ್ರವಾಹನಗಳು ಮತ್ತು 24 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಇನ್ನಷ್ಟು ಅಪರಾಧಭಾಗಿಯಾಗಿರುವ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ.ಪಕರಣಗಳಲ್ಲಿ ಬೆಂಗಳೂರು: ನಗರದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್, ಮತ್ತು ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಕೆ.ವಿ.ಶ್ರೀನಿವಾಸ್ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ. ಎಲ್. ಸುಬ್ರಮಣ್ಯಸ್ವಾಮಿ ರವರ ನೇತೃತ್ವದ ಸಿಬ್ಬಂದಿಯವರ ತಂಡ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ \’ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್‌ಕುಮಾರ್ ರವರು ಶ್ಲಾಘಿಸಿರುತ್ತಾರೆ.