ಆಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಂಪುರದಲ್ಲಿ ಪಿರಾದುದಾರರ ಕಛೇರಿಯ ಮುಂಭಾಗದಲ್ಲಿ ನಿಲ್ಲಿಸಿದ್ದ ಹೊಂಡ್ಯ ಅಸೆಂಟ್ ಕಾರನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ದಿನಾಂಕ: 05.10.2023 ರಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಒಂದು ವಿಶೇಷ ತಂಡವನ್ನು ರಚಿಸಿದ್ದು, ಆ ತಂಡವು 6 ಜನ ಆರೋಪಿತ ವ್ಯಕ್ತಿಗಳನ್ನು ವಶ ಪಡಿಸಿಕೊಳ್ಳಲಾಯಿತು. ದೀರ್ಘವಾಗಿ ವಿಚಾರಣೆಗೆ ಒಳಪಡಿಸಲಾಗಿ ಆ ವ್ಯಕ್ತಿಗಳು ನೀಡಿದ ಮಾಹಿತಿ ಮೇರೆಗೆ, ಅವರಿಂದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 17.5 ಲಕ್ಷ ರೂ. ಮೌಲ್ಯದ ಒಂದು ಹೊಂಡ್ಯ ಆಸೆಂಟ್ ಕಾರು, 15 ದ್ವಿಚಕ್ರ ವಾಹನ ಹಾಗೂ 11,750/- ರೂ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ವಶಪಡಿಸಿಕೊಂಡ ಆರೋಪಿತರ ಬಂಧನದಿಂದ ಅಮೃತಹಳ್ಳಿ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣ ಮತ್ತು 3 ಸುಲಿಗೆ ಪ್ರಕರಣ, ಬಾಣಸವಾಡಿ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣ ಹಾಗೂ ಕೊತ್ತನೂರು, ಮಹದೇವಪುರ ಮತ್ತು ಯಲಹಂಕ ಪೊಲೀಸ್ ಠಾಣೆಗಳಲ್ಲಿ ಒಂದೊಂದು ಸುಲಿಗೆ ಪಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿರುತ್ತದೆ.
ಬೆಂಗಳೂರು ನಗರ, ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀಪ್ರಸಾದ್ ಬಿ.ಎಂ.
ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಸಂಪಿಗೆಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಎಂ.ಮುರುಗೇಂದಯ್ಯ ರವರ ನೇತೃತ್ವದಲ್ಲಿ, ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಅಂಬರೀಶ್ ಎಂ.
ಹಾಗೂ ಅಪರಾಧ ವಿಭಾಗದ ಸಿಬ್ಬಂದಿಯವರು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಬಿ.ದಯಾನಂದ್ ಹಾಗೂ ಅಪರ ಪೊಲೀಸ್ ಆಯುಕ್ತರು, ಪೂರ್ವ ಶ್ರೀ ರಮನ್‌ಗುಪ್ತಾ ರವರು ಪ್ರಶಂಶಿಸಿರುತ್ತಾರೆ.