ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಕಾಂಬಿಕಾ ಲೇಔಟ್, ಮೈಲಸಂದ್ರದ ಮನೆಯ ಮುಂದೆ ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್‌ನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣವನ್ನು ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ಕೆಂಗೇರಿ ಪೊಲೀಸರು 4 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅವರುಗಳು ನೀಡಿದ ಮಾಹಿತಿ ಮೇರೆಗೆ ರೂ. 1,91,000/- ಬೆಲೆ ಬಾಳುವ 03 ದ್ವಿ ಚಕ್ರ ವಾಹನ, 02 ಪ್ಯಾಸೆಂಜರ್ ಆಟೋ ರಿಕ್ಷಾ, 02 ಹೆಚ್.ಪಿ ಗ್ಯಾಸ್ ಸಿಲಿಂಡರ್‌ಗಳು ಮತ್ತು ನಗದು ರೂ.13,000/-ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಆರೋಪಿಗಳ ಬಂಧನದಿಂದ ಕೆಂಗೇರಿ ಪೊಲೀಸ್ ಠಾಣೆಯ 16 ಪ್ರಕರಣಗಳು, ಚಾಮರಾಜಪೇಟೆ ಪೊಲೀಸ್ ಠಾಣೆಯ 01 ಪ್ರಕರಣ, ಬನಶಂಕರಿ ಪೊಲೀಸ್ ಠಾಣೆಯ 01 ಪ್ರಕರಣ ಮತ್ತು ಬಂಡೆಪಾಳ್ಯ ಪೊಲೀಸ್ ಠಾಣೆಯ (1 ಪ್ರಕರಣಗಳು ಸೇರಿದಂತೆ ಒಟ್ಟು 19 ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಕಾರ್ಯಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಎಸ್. ಗಿರೀಶ್ ಮತ್ತು ಕೆಂಗೇರಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಪರಮೇಶ್ವರ್ ರವರ ಮಾರ್ಗದರ್ಶನದಲ್ಲಿ ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಸಂಜೀವ್‌ಗೌಡ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿರವರುಗಳು ಮೇಲ್ಕಂಡ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.