ಎಲ್ಲೆಲ್ಲೂ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿಗಳನ್ವಯ ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲು ಸಹಕರಿಸಬೇಕೆಂದು ಧಾರ್ಮಿಕ ಕಾರ್ಯಗಳನ್ನು ಸರ್ಕಾರದ ಆದೇಶದಂತೆ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಕರೆ ನೀಡಿಲಾಗಿದೆ. ದಿನಾಂಕ 22.04.2021 ಗುರುವಾರದಂದು ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಎಲ್ಲಾ ಧರ್ಮಗಳ ಮುಖಂಡರುಗಳ ಶಾಂತಿ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಲ್ಲಾ ಸಮುದಾಯದವರು ಧಾರ್ಮಿಕ ಕಾರ್ಯಗಳನ್ನು ಆಚರಿಸಿಕೊಂಡು ಬಂದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ, ಅದೇ ರೀತಿ ಈ ಬಾರಿ ಕೋವಿಡ್ ನಿಯಮಾವಳಿಗಳನ್ವಯ ಕಡ್ಡಾಯವಾಗಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ, ಪೂಜೆ, ಧಾರ್ಮಿಕ ಕಾರ್ಯಗಳನ್ನು ಮಾತ್ರ ಮಾಡಿಕೊಂಡು ಹೋಗಲು ಸಹಕರಿಸಬೇಕೆಂದು ಕೋರಲಾಗಿದೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್