ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ್ಪರಪೇಟೆ ಪೊಲೀಸರು, ಠಾಣಾ ಸರಹದ್ದಿನ ಬೆಂಗಳೂರಿನ ವಿವಿಧ ಕಡೆ ಹಾಗೂ ದಾವಣಗೆರೆ ಜಿಲ್ಲೆ, ರಾಮನಗರ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಕಳತನ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಿರುತ್ತಾರೆ. ಸದರಿ ಆರೋಪಿಯು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಂದಿಗೆ ಸೇರಿ ಕೃತವೆಸಗುತ್ತಿದ್ದು, ಅವರ ಮಾಹಿತಿ ಮೇರೆಗೆ ಒಟ್ಟು 9 ವಿವಿಧ ಕಂಪನಿಗಳ ದ್ವಿಚಕ್ರವಾಹನಗಳನ್ನು ವಶ ಪಡಿಸಿಕೊಂಡಿರುತ್ತಾರೆ. ಇದರ ಒಟ್ಟು ಮೌಲ, 11,40,000 ಸದರಿ ಆರೋಪಿಯಿಂದ ಉಪರಪೇಟೆ ಪೊಲೀಸ್ ಠಾಣೆಯ 2 ಪಕರಣಗಳು, ಚಂದ್ರಲೇಔಟ್ ಕಾಮಾಕ್ಷಿಪಾಳ್ಯ…. ಬ್ಯಾಟರಾಯನಪುರ, ಜ್ಞಾನಭಾರತಿ, ಹನುಮಂತನಗರ, ಹಾರೋಹಳ್ಳಿ, ದಾವಣಗೆರೆ ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆಯ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್
ಆಯುಕ್ತರಾದ ಶ್ರೀ ಲಕ್ಷಣ್ ನಿಂಬರ್ಗಿ ರವರ ಸೂಕ್ತ ಮಾರ್ಗದರ್ಶನದಲ್ಲಿ ಚಿಕ್ಕಪೇಟೆ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್‌ರವರಾದ ಶ್ರೀ. ಕೆ.ಸಿ.ಗಿರಿ ರವರ ನಿರ್ದೇಶನದಲ್ಲಿ ಉಪ್ಪರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ವಸಂತ್. ಹೆಚ್.ಎಸ್ ಹಾಗೂ ಸಿಬ್ಬಂದಿಯವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಬಿ.ದಯಾನಂದ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು