ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನ ಕಳವು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ನರಸಿಂಹರಾಜ ವಿಭಾಗದ ಎ.ಸಿ.ಪಿ ರವರ ನೇತೃತ್ವದಲ್ಲಿ 1ವಿಶೇಷ ತಂಡವನ್ನೂ ರಚಿಸಿತ್ತು ,ಕಾರ್ಯಪ್ರವೃತ್ತರಾದ ಈ ವಿಶೇಷ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗಿ ಆರೋಪಿಗಳು ವಿಜಯನಗರ ಮತ್ತು ಆಲನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕನ್ನ ಕಳವು ಮಾಡಿರುವುದಾಗಿ ತಿಳಿಸಿದ್ದರ ಮೇರೆಗೆ ಆರೋಪಿಗಳಿಂದ ರೂ30,00,000/- ಮೌಲ್ಯದ 626ಗ್ರಾಂ ತೂಕದ ಚಿನ್ನದ ಒಡವೆಗಳು ರೂ40,000/- ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ 1ದ್ವಿಚಕ್ರ ವಾಹನವನ್ನು ಅಮಾನತುಪಡಿಸಿಕೊಂಡಿರುತ್ತಾರೆ .
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿಜಯ ನಗರ ಪೊಲೀಸ್ ಠಾಣೆಯ 6ಹಾಗೂ ಆಲನಹಳ್ಳಿಯ 1 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ .

ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರಾದ
ಡಾ।। ಚಂದ್ರಗುಪ್ತಾ ಐ.ಪಿ.ಎಸ್ ರವರು ಪ್ರಸಂಶಿಸಿರುತ್ತಾರೆ
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
