ಉಡುಪಿ: ದಿನಾಂಕ 06.08.2026 ರಂದು ಕೊಲ್ಲೂರು ಪೊಲೀಸ್ ಠಾಣೆಯ ಬೆಳ್ಳಾಲ್ ಗ್ರಾಮ ವ್ಯಾಪ್ತಿಯಲ್ಲಿ, ದೂರುದಾರಳಾದ ನೊಂದ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ಹಾಜರಾಗಿ ದೂರು ದಾಖಲಿಸಿದ್ದಾರೆ. ದೂರಿನ ಸಾರಾಂಶದ ಪ್ರಕಾರ, ಸನತ್ ಕುಂದಾಪುರ ಎಂಬ ವ್ಯಕ್ತಿ ಆಕೆಯ ಮನೆಗೆ ಬಂದು ಆಕೆಯ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಮತ್ತು ಆಕೆಯ ಜಾತಿಗೆ ಅವಮಾನ ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 51/2026 ರ ಅಡಿಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಯುವಕನ ದೂರಿನ ಮೇರೆಗೆ, ಸದ್ರಿಯ ಸಮಯದಲ್ಲಿ ನೊಂದ ಮಹಿಳೆಯ ಕುಟುಂಬ ಸದಸ್ಯರು ಯುವಕನನ್ನು ಕಟ್ಟಿಹಾಕಿ ಹಲ್ಲೆ ಮಾಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಮತ್ತು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧ ಸಂಖ್ಯೆ 52/2026 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎರಡೂ ಪ್ರಕರಣಗಳು ತನಿಖೆ ಹಂತದಲ್ಲಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು.

ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







