ಪೊಲೀಸ್ ಧ್ವಜ ದಿನಾಚರಣೆಯನ್ನು ದಿನಾಂಕ 02/04/2021ರಂದು ಮಡಿಕೇರಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾರಂಭದಲ್ಲಿ ನಿವೃತ್ತ ಡಿವೈಎಸ್ಪಿ ಬಿ.ಆರ್.ಲಿಂಗಪ್ಪರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪೊಲೀಸ್ ಕವಾಯತಿನಲ್ಲಿ ಗೌರವವಂದನೆಯನ್ನು ಸ್ವೀಕರಿಸಿದರು.ಈ ಸಂದರ್ಭ ಪ್ರತಿ ವರ್ಷದಂತೆ ಜಿಲ್ಲೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಗೆ ಭಾರತದ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪರವರ ಹೆಸರಿನಲ್ಲಿ ಅವರ ಮಗ ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪರವರು ನೀಡುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಟ್ರೋಫಿಯನ್ನು ಈ ಬಾರಿ ಜಿಲ್ಲೆಯ ಸುಂಟಿಕೊಪ್ಪ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ.ಎಸ್.ದಯಾನಂದರವರಿಗೆ ಪ್ರಧಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಳಕೇರಿ ನಿಡುಗಣೆ ಗ್ರಾಮದಲ್ಲಿ ನಡೆದ ಒಂಟಿ ಮಹಿಳೆಯ ಕೊಲೆ ಪ್ರಕರಣವನ್ನು ಭೇದಿಸಿದ ಮಡಿಕೇರಿ ಗ್ರಾಮಾಂತರ ಮತ್ತು ಜಿಲ್ಲಾ ಅಪರಾಧ ಪತ್ತೆ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಪ್ರಶಂಸಿಸಿ ಮೃತ ಮಹಿಳೆಯ ಮಗ ಗೋಪಾಲಕೃಷ್ಣರವರು ನೀಡಿದ ನಗದು ಬಹುಮಾನವನ್ನು ಕೃತ್ಯವನ್ನು ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ ವಿತರಿಸಲಾಯಿತು.ಬೆಳಿಗ್ಗೆ ನಡೆದ ಸಮಾರಂಭದಲ್ಲಿ ನಿವೃತ್ತ ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ, ಪಿವಿಎಸ್ಎಂ, ಎಸ್ಎಂ, ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕ್ಷೇಮಾಭವೃದ್ದಿ ಸಂಘದ ಅಧ್ಯಕ್ಷ ನಿವೃತ್ತ ಎಸ್.ಪಿ.ಯಾದ ಎ.ಕೆ.ಸುರೇಶ್, ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಐಪಿಎಸ್ರವರು ಪ್ರಾಸ್ತಾವಿಕ ಭಾಷಣ ಮಾಡಿ ಎಲ್ಲರನ್ನೂ ಸ್ವಾಗತಿಸಿದರೆ ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ದಿನೇಶ್ ಕುಮಾರ್ರವರು ವಂದಿಸಿದರು. ಎಆರ್ಎಸ್ಐ ಅಂತೋಣಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್