ಸಾರ್ವಜನಿಕರು ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸಲು ಪೊಲೀಸ್ ಇಲಾಖೆಯು ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಸಾಕಷ್ಟು ರೀತಿಯಲ್ಲಿ ಕೈಗೊಂಡಿದ್ದು, ಆದಾಗ್ಯೂ ತಮ್ಮ ಆತ್ಮ, ಪ್ರಾಣ, ಆಸ್ತಿ-ಪಾಸ್ತಿ ರಕ್ಷಣೆಗಾಗಿ ಪ್ರತಿಯೊಬ್ಬರಿಗೂ ನಾಗರೀಕ ಬಂದೂಕು ತರಬೇತಿಯ ಅವಶ್ಯಕತೆಯಿದೆ. ಕೆಜಿಎಫ್‌ನ ಚಾಂಫೀಯನ್ ರೀಫ್ಸ್ ನಲ್ಲಿನ ಡಿಎಆರ್‌ನಲ್ಲಿ ನಡೆಯುತ್ತಿರುವ ನಾಗರೀಕ ಬಂದೂಕು ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗುವ ಮೂಲಕ ನೆರವೇರಿಸುವ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕೆಜಿಎಫ್ ಪೊಲೀಸ್ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕುಗಳಿಂದ ೬೦ ಮಂದಿ ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದು, ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿರುತೆ. ತರಬೇತಿಯನ್ನು ಪಡೆದ ನಂತರ ನಿಯಮಾನುಸಾರ ಬಂದೂಕು ಪರವಾನಗಿಯನ್ನು ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಪಡೆಯುವುದು, ಪರವಾನಗಿ ಪಡೆದವರು ಜಾಗೃತೆಯಿಂದ ತಮ್ಮ ಬಂದೂಕನ್ನು ಸುರಕ್ಷಿತವಾಗಿಡುವುದರ ಮೂಲಕ ಗೌಪ್ಯತೆಯನ್ನು ಕಾಪಾಡುವಂತೆ ಹಾಗೂ ಯಾವುದೇ ರೀತಿಯಲ್ಲೂ ಬಂದೂಕು ದುರುಪಯೋಗವಾಗದಂತೆ ಎಚ್ಚರ ವಹಿಸಲು ತಿಳಿಸಿರುತೆ. ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷ ವಳ್ಳಲ್ ಮುನಿಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪೊಲೀಸ್ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ತಾವು ಸಹಕಾರ ನೀಡುವುದಾಗಿ ತಿಳಿಸಿದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್