ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರುದಾರರು, ಆಂಧ್ರಪ್ರದೇಶದ ಮುಲಿವೆಂದುಲದಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗ, ಅವರ ಲ್ಯಾಪ್ಟಾಪ್ ಕಳ್ಳತನವಾಗಿರುವ ಬಗ್ಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ಕೈಕೊಂಡ ಪೊಲೀಸರು ಇಬ್ಬರು ಆಸಾಮಿಗಳನ್ನು ದಸ್ತಗಿರಿ ಮಾಡಿ ಅವರು ನೀಡಿದ ಮಾಹಿತಿ ಮೇರೆಗೆ ಬಸ್ಸುಗಳಲ್ಲಿ ಪಯಾಣ ಮಾಡುತ್ತಾ. ಬೇರೆ ಪ್ರಯಾಣಿಕರ ಲ್ಯಾಪ್ಟಾಪ್ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದು, ಅವರಿಂದ ಸುಮಾರು 9 ಲಕ್ಷ ಮೌಲ್ಯದ 39 ಲ್ಯಾಪ್ಟಾಪ್ಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಕೊಡಿಗೆಹಳ್ಳಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ತನಿಖೆ ಮುಂದುವರೆದಿರುತ್ತದೆ.
ಆರೋಪಿತರ ಬಂಧನದಿಂದ ಕೊಡಿಗೆಹಳ್ಳಿ ಮತ್ತು ಉಪ್ಪಾರಪೇಟೆ ಪೊಲೀಸ್ ಠಾಣೆಗಳ ತಲಾ ಒಂದು ಪ್ರಕರಣಗಳು ಪತ್ತೆಯಾಗಿರುತ್ತವೆ.
ಬೆಂಗಳೂರು ನಗರ, ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀಪ್ರಸಾದ್ ಬಿ.ಎಂ. ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಯಲಹಂಕ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಮಂಜುನಾಥ್ ರವರ ನೇತೃತ್ವದಲ್ಲಿ, ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ: ಮಹೇಶ್ ಎಂ.ಎ. ಹಾಗೂ ಸಿಬ್ಬಂದಿರವರುಗಳ ತಂಡ ಆರೋಪಿಗಳನ್ನು ದಸ್ತಗಿರಿ ಮಾಡಿ, ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಶಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು