ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಮನೆ ಕಳವು ಪ್ರಕರಣಕ್ಕೆ
ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯ ಪೊಲೀಸರು ಓರ್ವ ರೂಡಿಗತ
ವ್ಯಕ್ತಿಯನ್ನು ವಶಕ್ಕೆ ಪಡೆದು ಆತನಿಂದ
ಪ್ರಕರಣಕ್ಕೆ ಸಂಭಂದಿಸಿದಂತೆ 4.50.000/- ಮೌಲ್ಯದ ಸುಮಾರು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ.
ಈ ಕಾರ್ಯಾಚರಣೆಯನ್ನು ಶ್ರೀ ಗಿರೀಶ್.ಎಸ್ ಐಪಿಎಸ್, ಉಪ ಪೊಲೀಸ್ ಆಯುಕ್ತರು ಪಶ್ಚಿಮ ವಿಭಾಗ ರವರ ನೇತೃತ್ವದಲ್ಲಿ, ಶ್ರೀ.ಚಂದನ್ ಕುಮಾರ್ ಎನ್ ಸಹಾಯಕ ಪೊಲೀಸ್ ಆಯುಕ್ತರು ವಿಜಯನಗರ ಉಪವಿಭಾಗ ರವರ ಮಾರ್ಗದರ್ಶನದಲ್ಲಿ, ಗೋವಿಂದರಾಜನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ ಸುಬ್ರಮಣಿಕೆ ರವರ ಸಾರಥ್ಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯವರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.