ಬೆಂಗಳೂರು :ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಸಹಯೋಗದಲ್ಲಿ ಕನ್ನಡ ಕಸ್ತೂರಿ ಸಂಘ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಗಾರದಲ್ಲಿ ಬೆಂಗಳೂರು ನಗರ ವಿಲ್ಸನ್ ಗಾರ್ಡನ್ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ. ಶಂಕರಾಚಾರ್ ಅವರು ಭಾಗವಹಿಸಿದ ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾತನಾಡಿ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮೋಟಾರ್ ವಾಹನ ಚಾಲನೆ ಮಾಡುವಾಗ ಅನುಸರಿಸುವ ಕ್ರಮಗಳ ಬಗ್ಗೆ , ವಾಹನ ಕಾಯ್ದೆ ಬಗ್ಗೆ ಅರಿವು ಮತ್ತು ERSS 112 ವೆಹಿಕಲ್ ಬಗ್ಗೇ ಅದರ ಅನುಕೂಲಗಳ ಬಗ್ಗೆ ಸಾರ್ವಜನಿಕರಿಗೆ ಸಂವಾದದ ಮುಖಾಂತರ ಕಾನೂನು ಅರಿವನ್ನು ಮೂಡಿಸಿದರು.
ಅಲ್ಲದೆ ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಮಾಹಿತಿ ಹಾಗೂ ಅಪರಾಧ ತಡೆಯುವಲ್ಲಿ ಹಾಗೂ ಅಪರಾಧ ಪತ್ತೆ ಹಚ್ಚುವಲ್ಲಿ ಸಾರ್ವಜನಿಕರಿಗೆ ಪಾತ್ರದ ಬಗ್ಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಿ, ಸೂಕ್ತ ಮಾರ್ಗದರ್ಶನ ನೀಡಿದರು.
ಈ ವೇಳೆ ಶ್ರೀ .ಶಂಕರಾಚಾರ್ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ. ಮಠಪತಿಯವರು ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ .ಪ್ರಿಯದರ್ಶಿನಿ ಯವರು ಮತ್ತು ಸಿಬಂದಿಗಳು ಉಪಸ್ಥೀತರಿದ್ದರು.