ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರದಲ್ಲಿ ಏ.10 ರಿಂದ 20ರ ವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಆದೇಶ
ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಇನ್ಸ್ ಪೆಕ್ಟರ್ ಶ್ರೀ. ಸುನೀಲ್ ವೈ ನಾಯಕ್ ಅವರ ನೇತೃತ್ವದಲ್ಲಿ ನೈಟ್ ಕಫ್ಯೂ ಜಾರಿ ಹಿನ್ನಲೆಯಲ್ಲಿ ನೈಟ್ ಕಫ್ಯೂ ಬಗ್ಗೆ ಪೊಲೀಸರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ನಡೆಯಿತ್ತು. ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬವನ್ನು ಸರಳವಾಗಿ ಆಚರಿಸಬೇಕು,ಜೀವ-ಜೀವನೋಪಾಯಗಳ ಸಮತೋಲನ ಕಾಪಾಡುವ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸೋಣ, ಮುನ್ನೆಚ್ಚರಿಕೆಯೊಂದಿಗೆ ಮುನ್ನಡೆಯೋಣ.ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ಜೊತೆ ನಾಗರಿಕರು ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ.
ಕೊರೊನಾ ಬಗ್ಗೆ ಜಾಗೃತಿ ಕರಪತ್ರ ಸಾರ್ವಜನಿಕರಿಗೆ ಇನ್ಸ್ ಪೆಕ್ಟರ್ ಶ್ರೀ..ಸುನೀಲ್ ವೈ ನಾಯಕ್ ಅವರು ವಿತರಣೆ ಮಾಡಿದರು .ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸುರಕ್ಷಿತವಾಗಿ ಹಬ್ಬ ಆಚರಿಸಿ ಎಂದು ವಿನಂತಿ ಮಾಡಿದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್