ಮಾರ್ಚ್ 08 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಡೀ ವಿಶ್ವದಾದ್ಯಂತ ಆಚರಿಸುತ್ತಿದ್ದು, ಇದೇ ಸಂದರ್ಭದಲ್ಲಿ ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನ ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಎಸಿಪಿ ಕರಿಬಸವನಗೌಡ ಅವರು ಭಾಗವಹಿಸಿ ಮಹಿಳೆಯರ ಹಕ್ಕುಗಳ ಬಗ್ಗೆ, ಮಹಿಳೆಯರ ರಕ್ಷಣೆ ಸಂಬಂಧ ಇರುವ ಕಾನೂನುಗಳ ಬಗ್ಗೆ ಹಾಗೂ ಪ್ರತಿಯೊಂದು ಪೋಲಿಸ್ ಠಾಣೆಯಲ್ಲಿ women desk ಪ್ರಾರಂಭ ಮಾಡಿರುವ ಬಗ್ಗೆ ಹಾಗೂ ಅದನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಜಾಗೃತಿಯನ್ನು ನೀಡಲಾಯಿತು .
ಮಡಿವಾಳ ಠಾಣಾ ಸಬ್ ಇನ್ಸ್ ಪೆಕ್ಟರ್ ವಿನೋದ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್