ಮಧುಗಿರಿ ಉಪ ವಿಭಾಗದ ಕಚೇರಿಯಲ್ಲಿ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಪೊಲೀಸ್ ಠಾಣೆಗಳ ಎಲ್ಲಾ ಅಧಿಕಾರಿಗಳಿಗೆ, ಪೊಲೀಸ್ ಠಾಣೆಗಳಲ್ಲಿ ಮತ್ತು ಕಚೇರಿಗಳಲ್ಲಿ ನಿರ್ವಹಿಸಲಾಗುವ ಎಲ್ಲಾ ರಿಜಿಸ್ಟರ್‌ಗಳನ್ನು ಸರಿಯಾಗಿ ಬರೆಯುವ ಹಾಗೂ ನಿರ್ವಹಿಸುವ ಕುರಿತು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು ಪ್ರಾಯೋಗಿಕವಾಗಿ ಕಡತಗಳನ್ನು ತೋರಿಸಿ ಉದಾಹರಣೆಗಳ ಮೂಲಕ ಸೂಕ್ತ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ದಾಖಲೆಗಳ ಸರಿಯಾದ ಸಂರಕ್ಷಣೆ, ನಿಯಮಾನುಸಾರ ದಾಖಲಾತಿಗಳ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯವಿಧಾನಗಳ ಮಹತ್ವವನ್ನು ವಿವರಿಸಲಾಯಿತು. ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂಘ







