ವಿದ್ಯಾರಣ್ಯಪುರ ಪೊಲೀಸ್ ಠಾಣಾ ಸರಹದ್ದಿನ ಬಿ.ಇ.ಎಲ್ ಲೇಔಟ್‌ನಲ್ಲಿ ದಿನಾಂಕ: 13.03.2024 ಮನೆಯೊಂದರ ಬಾಗಿಲು ಮುರಿದು ಕಳ್ಳತನವಾಗಿರುವ ಕುರಿತು ಪಿರಾದುದಾರರು ದಿನಾಂಕ:14.03.2024 ರಂದು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ.
ಪ್ರಕರಣದ ತನಿಖೆ ಕೈಗೊಂಡ ವಿದ್ಯಾರಣ್ಯಪುರ ಪೊಲೀಸರು, ಒಂದು ವಿಶೇಷ ತಂಡವನ್ನು ರಚಿಸಿಕೊಂಡು, ದಿನಾಂಕ: 17.03.2024 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಇವರುಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಅವರುಗಳು ನೀಡಿದ ಮಾಹಿತಿ ಮೇರೆಗೆ ಸುಮಾರು ಕೆ 12 ಲಕ್ಷ ಮೌಲ್ಯದ 200 ಗ್ರಾಂ ಚಿನ್ನಾಭರಣ, 1.5 ಲಕ್ಷ ಮೌಲ್ಯದ 2 ಕೆ.ಜಿ ತೂಕದ ಬೆಳ್ಳಿ ಪದಾರ್ಥಗಳು ಮತ್ತು 3 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 16,60,000(ಹದಿನಾರು ಲಕ್ಷದ ಅರವತ್ತು ಸಾವಿರ ರೂಪಾಯಿ) ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ವಶಕ್ಕೆ ಪಡೆದುಕೊಂಡ ವ್ಯಕ್ತಿಗಳ ವಿಚಾರಣೆಯಿಂದ, ಬೆಂಗಳೂರು ನಗರದ ಇತರ ಪೊಲೀಸ್ ಠಾಣೆಗಳಲ್ಲಿ ವರದಿಯಾಗಿರುವ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಅವುಗಳಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ-02 ಕಳವು ಪ್ರಕರಣ, ಬಸವನಗುಡಿ ಪೊಲೀಸ್ ಠಾಣೆಯ-01 ಕಳವು ಪ್ರಕರಣ, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ-01 ಕಳವು ಪ್ರಕರಣ, ಕೆಂಗೇರಿ ಪೊಲೀಸ್ ಠಾಣೆಯ-01 ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿರುತ್ತದೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀಪ್ರಸಾದ್ ಬಿ.ಎಂ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಯಲಹಂಕ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ನರಸಿಂಹಮೂರ್ತಿ ರವರ ನೇತೃತ್ವದಲ್ಲಿ, ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯವರು ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಗಿರುತ್ತಾರೆ.