ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣದ ಪತ್ತೆ ಕಾರ್ಯ ಸಮಯದಲ್ಲಿ, ಒಬ್ಬ ಆರೋಪಿಯನ್ನು ಬಂಧಿಸಿ, ಆತನು ನೀಡಿದ ಮಾಹಿತಿ ಮೇರೆಗೆ, ಆರೋಪಿತನಿಂದ ಇದುವರೆಗೂ ಸುಮಾರು ರೂ.6,60 ಲಕ್ಷ ಮೌಲ್ಯದ 132 ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ಬಂಧನದಿಂದ ಬಸವನಗುಡಿ, ಬನಶಂಕರಿ, ವಲೇಶ್ವರಂ ಪೋಲೀಸ್ ಠಾಣೆಗಳ ತಲಾ ಒಂದೊಂದು ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತದೆ.
ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ರಾಹುಲ್ ಕಮಾ ಶಹಾಪುರವಾಡ್, ಮತ್ತು ಜಯನಗರ ಉಪ ವಿಭಾಗದ ಸಹಾಯಕ ಪೋಲೀಸ್ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಸುಬ್ರಹ್ಮಣ್ಯಸ್ವಾಮಿ.ಎಂ.ಎಲ್ ರವರು ಮತ್ತು ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡ ಈ ಕಾರ್ಯಾಚರಣೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತದೆ.