34 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣ ಮತ್ತು 100 ಗ್ರಾಂ ಬೆಳ್ಳಿ ವಸ್ತುಗಳ ವಶ.
ವೈಟ್ ಫೀಲ್ಡ್ ಪೊಲೀಸ್ ಠಾಣಾ ಸರಹದ್ದಿನ ನಲ್ಲೂರಹಳ್ಳಿ ಅಪಾರ್ಟ್‌ಮೆಂಟ್‌ನ ವಾಸಿಯಾದ ಪಿರಾದುದಾರರು ದಿನಾಂಕ:31/07/2024 ರಂದು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:30/07/2024 ರಂದು ರಾತ್ರಿ ಅಪಾರ್ಟ್‌ಮೆಂಟ್‌ನ ಹಿಂದಿನ ಬಾಗಿಲಿನ ಮುಖಾಂತರ ಅಪಾರ್ಟ್ ಮೆಂಟ್‌ನ್ನು ಯಾರೋ ಅಪರಿಚಿತರು ಪ್ರವೇಶಿಸಿ, ಕೊಠಡಿಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣಗಳು ಹಾಗೂ ಬೆಳ್ಳಿಯ ವಸ್ತುಗಳನ್ನು ಕಳದು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:04/08/2024 ರಂದು 3ನೇ ಕ್ರಾಸ್, ನಲ್ಲೂರುಹಳ್ಳಿ ಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಯಿತು. ವಶಕ್ಕೆ ಪಡೆದ ವ್ಯಕ್ತಿಯು ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಆತನ್ನು ನೀಡಿದ ಮಾಹಿತಿ ಮೇರೆಗೆ, ಆತನು ವಾಸವಿರುವ ಮನೆಯಲ್ಲಿ ಕಳವು ಮಾಡಿ ಇಟ್ಟಿದ್ದ 50 ಗ್ರಾಂ ಚಿನ್ನಾಭರಣ ಮತ್ತು 100 ಗ್ರಾಂ ಬೆಳ್ಳ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 34,00,000/-(ನಾಲ್ಕು ಲಕ್ಷ ರೂಪಾಯಿ).
ದಿನಾಂಕ:05/08/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಫೀಲ್ಡ್ ಡಾ:ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗ ಶ್ರೀಮತಿ.ರೀನಾ ಸುವರ್ಣ ರವರ ಮಾರ್ಗದರ್ಶನದಲ್ಲಿ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಗುರುಪ್ರಸಾದ್ ಹಾಗೂ ಅಧಿಕಾರಿ/ಸಿಬ್ಬಂದಿರವರು ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.