ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ʼಮನೆ ಮನೆಗೆ ಪೊಲೀಸ್ʼ ಕಾರ್ಯಕ್ರಮದ ಭಾಗವಾಗಿ ದೃಷ್ಠಿ ಯೋಜನೆಯನ್ನು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಇಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೃಷ್ಠಿ ಯೋಜನೆ ಕಾರ್ಯಕ್ರಮವನ್ನು ಉಡುಪಿ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಂ ಶಂಕರ್ ಐಪಿಎಸ್ ರವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿದರು.
ಪ್ರತೀ ಠಾಣಾ ವ್ಯಾಪ್ತಿಯು ದೊಡ್ಡದಾಗಿದ್ದು, ಪ್ರತೀ ಠಾಣಾ ವ್ಯಾಪ್ತಿಯಲ್ಲಿರುವ ಜನ ಸಂಖ್ಯೆ ಅಂದಾಜು 80 ಸಾವಿರದಿಂದ 1 ಲಕ್ಷ ಎನ್ನುವುದು . ಅಷ್ಟೂ ಜನಸಂಖ್ಯೆ ಇರುವ ಪ್ರದೇಶವನ್ನು ಕೇವಲ 40-60 ಜನ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅಂದರೇ ಪ್ರತೀ ಪೊಲೀಸರಿಗೆ ಸುಮಾರು 1700 ರಿಂದ 1800 ಜನರ ಜವಾಬ್ದಾರಿಯು ಬರುತ್ತದೆ. ಈ ದೆಸೆಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತೀ ಬೀಟಿನಲ್ಲಿ ಸುಮಾರು 80-100 ಮನೆಗಳ ಒಂದು Welfare Committee ಯನ್ನು ರಚಿಸುವುದು ಮತ್ತು ಆ ಕಮಿಟಿಯಿಂದ ಓರ್ವ ಪ್ರೈವೇಟ್ ಸೆಕ್ಯೂರಿಟಿ ಗಾರ್ಡ್‌ನ್ನು ನೇಮಿಸಿ, ಈ ಬೀಟ್‌ಗಳಲ್ಲಿ ರಾತ್ರಿ ಗಸ್ತು ಕರ್ತವ್ಯವನ್ನು ನಿರ್ವಹಿಸುವಂತೆ ಮಾಡುವುದು ಹಾಗೂ ಬೀಟ್ ಪೊಲೀಸರು ಈ ಪ್ರೈವೇಟ್ ಸೆಕ್ಯೂರಿಟಿ ಗಾರ್ಡ್‌ನ ನಿರಂತರ ಸಂಪರ್ಕದಲ್ಲಿರುವುದು. ಇದು ಅವರ ಮನೆಗಳಿಗೆ ರಕ್ಷಣೆಯನ್ನು ನೀಡುವಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ರೀತಿಯ ಕಮಿಟಿಗಳನ್ನು ಮಾಡುವುದರಿಂದ ಆ ಪ್ರದೇಶಗಳಲ್ಲಿ ವಾಸವಾಗಿರುವ ಜನರ ರಕ್ಷಣೆ, ವಯೋವೃದ್ಧರ ಕಾಳಜಿ, ರಾತ್ರಿ ಗಸ್ತು ಮಾಡುವುದರಿಂದ ಆಸ್ತಿಪಾಸ್ತಿ, ಜೀವ ರಕ್ಷಣೆಗಳನ್ನು ಮಾಡಬಹುದಾಗಿದೆ.
ಈ ರೀತಿಯಾದ ಕಮಿಟಿಗಳನ್ನು ಕುಂದಾಪುರ ಉಪ ವಿಭಾಗದ ಕುಂದಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1, ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2, ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ1, ಕಾರ್ಕಳ ಉಪ ವಿಭಾಗದ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ1, ಉಡುಪಿ ಉಪ ವಿಭಾಗದ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2, ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ1, ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ1, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ1, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1, ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1 ಕಮಿಟಿಯನ್ನು ರಚಿಸಲಾಗಿರುತ್ತದೆ. ಇದುರವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 14 ಕಮಿಟಿಗಳನ್ನು ರಚಿಸಿ ಈ ದೃಷ್ಠಿ ಯೋಜನೆಯನ್ನು ಜಾರಿಗೆ ತರಲಾಗಿದೆ.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ