ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದಿನಾಂಕ-27-05-2023 ರಂದು ಬೆಳಿಗ್ಗೆ 70 ವರ್ಷದ ವೃದ್ಧ ಮಹಿಳೆಯು ನಡೆದುಕೊಂಡು ಬರುತ್ತಿದ್ದಾಗ, ಎದುರುಗಡೆಯಿಂದ ಇಬ್ಬರು ಅಪರಿಚಿತರು ಬೈಕಿನಲ್ಲಿ ಬಂದು ಏಕಾಏಕಿ ವಿದ್ಯಾದುಗಾರರ ಕತ್ತಿನಲ್ಲಿದ್ದ ಚಿನ್ನದ ಮಾಂಗು ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು, ನೀಡಿದ ದೂರಿನ ಮೇರೆಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲೆಯ ಕಾಪೂ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನದಲ್ಲಿರುತ್ತಾರೆ. ಸದರಿ ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸ್ ಠಾಣೆಯ ಸರಗಳ್ಳತನ ಪ್ರಕರಣದಲ್ಲಿ ಪೊಲೀಸ್ ಅಭಿರಕ್ಷೆಗೆ ಪಡೆದು ವಿಚಾರಣೆ ಮಾಡಲಾಗಿ, ಆರೋಪಿಗಳ ಮಾಹಿತಿ ಮೇರೆಗೆ ಸುಮಾರು 3 ಲಕ್ಷ ರೂ. ಬೆಲೆ ಬಾಳುವ 49 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು
ವಶ ಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಹಳೆ ಎಂ.ಓ. ಆಸಾಮಿಗಳಾಗಿದ್ದು, 2018 ನೇ ಸಾಲಿನಲ್ಲಿ ಮಲ್ಲೇಶ್ವರಂ ಪೊಲೀಸ್ ಠಾಣೆಯ ಸರಗಳತನ ಪ್ರಕರಣದಲ್ಲಿ ದಸ್ತಗಿರಿಯಾಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿರುವುದಾಗಿ ತಿಳಿದು ಬಂದಿರುತ್ತವೆ.
ಬೆಂಗಳೂರು ನಗರ, ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಶಿವ ಪ್ರಕಾಶ್ ದೇವರಾಜು,
ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರವೀಣ್ ಎಂ. ಎಸಿಪಿ ಮಲ್ಲೇಶ್ವರಂ ಉಪ ವಿಭಾಗ ಮತ್ತು
ಚಂದ್ರಶೇಖರ್.ಎಂ. ಪೊಲೀಸ್ ಇನ್ಸ್‌ಪೆಕ್ಟರ್, ಮಲ್ಲೇಶ್ವರಂ ಪೊಲೀಸ್ ಠಾಣೆ ರವರ ನೇತೃತ್ವದ ತಂಡ
ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಬಿ .ದಯಾನಂದ ರವರು
ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.