ವಾಯುಭಾರ ಕುಸಿತದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕೆರೆ ಹಾಗೂ ನದಿಗಳು ಉಕ್ಕಿ ಹರಿಯುತ್ತಿರುತ್ತವೆ. ಇದರಿಂದಾಗಿ ರಸ್ತೆಗಳ ಮೇಲೆ ನೀರು ಹರಿಯುತ್ತಿರುತ್ತದೆ. ಎಲ್ಲಾ ಕಡೆ ಸೂಕ್ತ ಬ್ಯಾರಿಕೇಡ್ ಮತ್ತು ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಹಾಗೂ ಸಾರ್ವಜನಿಕರಿಗೆ ಓಡಾಡಲು ಪರ್ಯಾಯ ರಸ್ತೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಮಳೆ ಇನ್ನೂ ಮುಂದುವರಿಯುವ ಸಂಭವವಿದ್ದು, ಹೆಚ್ಚಿನ ಅವಘಡಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಕೆರೆ ಹಾಗೂ ನದಿಗಳ ಬಳಿ ನೋಡಲು ಹೋಗಿ ಜಾರಿ ಬೀಳುವ ಸಂಭವವಿರುತ್ತದೆ. ಆದ್ದರಿಂದ ಮಕ್ಕಳು ಮತ್ತು ಯುವಕರನ್ನು ಕೆರೆಗಳ ಹಾಗೂ ನದಿಗಳ ಬಳಿ ಹೋಗದಂತೆ, ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಹೊರಗಡೆ ಓಡಾಡಲು ಹಾಗೂ ನದಿ ಮತ್ತು ಕೆರೆಕಟ್ಟೆಗಳಲ್ಲಿ ಸುಮ್ಮನೆ ಸುತ್ತಾಡದೇ, ಮೀನು ಹಿಡಿಯಲು ಹೋಗದಂತೆ ತಿಳಿಸಲಾಗಿದೆ. ತುಂಬಿ ಹರಿಯುತ್ತಿರುವ ಎಲ್ಲಾ ಕೆರೆ ಹಾಗೂ ನದಿ ಕಡೆಗಳಲ್ಲಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಒದಗಿಸಿರುತ್ತಾರೆ.