ಕೆಂಪೇಗೌಡ ನಗರ ಪೊಲೀಸ್ ಠಾಣೆ ರವರಿಗೆ ದೊರೆತ ಖಚಿತ ಮಾಹಿತಿ ಏನೆಂದರೆ,
ಚಾಮರಾಜಪೇಟೆಯ ಆದರ್ಶ ಕಾಲೇಜ್ ಹಿಂದಿನ ಗೇಟ್ ಹತ್ತಿರ ಬಿಳಿ ಬಣ್ಣದ ಆಕ್ಟಿವಾ ನಂ. ಕೆಎ 04 ಜೆಸಿ 0462 ದ್ವಿಚಕ್ರ ವಾಹನದಲ್ಲಿ ಇಬ್ಬರು ಆಸಾಮಿಗಳು ಅಕ್ರಮವಾಗಿ ಮಾದಕ ವಸ್ತುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಇತರರಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕೂಡಲೆ ಪ್ರವೃತ್ತರಾದ ಕೆ..ಜಿ.ನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ, ಇಬ್ಬರು ನೈಜೀರಿಯಾ ದೇಶದ ಪ್ರಜೆಗಳಾಗಿದ್ದು, ಅವರನ್ನು ಪ್ರಶ್ನಿಸಲಾಗಿ, ನಂತರ ಆರೋಪಿಗಳ ವಶದಲ್ಲಿದ್ದ ಸುಮಾರು 30 ಲಕ್ಷ ಬೆಲೆಬಾಳುವ 260 ಗ್ರಾಂ ತೂಕದ ಕೊಕೈನ್ ಮತ್ತು 30.3 ಗ್ರಾಂ ತೂಕದ ECSTASY PILLS ಹಾಗೂ ಒಂದು ಆಕ್ಟಿವಾ ಹೋಂಡಾವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿರುತ್ತದೆ.
ದಾಳಿಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಟಿ. ಕೃಷ್ಣಕಾಂತ್ ರವರ ಮಾರ್ಗದರ್ಶನದಲ್ಲಿ, ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ನಾಗರಾಜ್.ಜಿ ರವರ ನೇತೃತ್ವದಲ್ಲಿ ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಕ್ಷಿತ್ ಹಾಗೂ ಸಬ್ ಇನ್ಸ್ಪೆಕ್ಟರ್ ನಾಗಭೂಷಣ್ ಮತ್ತು ಸಿಬ್ಬಂದಿಯವರು ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ಎನ್.ಸತೀಶ್ ಕುಮಾರ್ ರವರು ಪ್ರಶಂಸಿರುತ್ತಾರೆ.
ವರದಿ : ಆಂಟೋನಿ ಬೇಗೂರು