ವಿ.ವಿ.ಪುರಂ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿ:-14-08-2023 ರಂದು ಮಾದಕ ವಸ್ತುವಾದ ಎಂ.ಡಿ.ಎಂ.ಎ ನ್ನು ಮಾರಾಟ ಮಾಡುತ್ತಿರುವುದಾಗಿ, ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರಿಗೆ, ಕಾರ್ಯಪ್ರವೃತ್ತರಾದ ಪೊಲೀಸರು ಒಬ್ಬ ನೈಜೀರಿಯಾದ ಆಸಾಮಿಯನ್ನು ದಸ್ತಗಿರಿ ಮಾಡಿ ವಿಚಾರಿಸಲಾಗಿ ಗೋವಾ ರಾಜ್ಯದಲ್ಲಿ ಒಬ್ಬ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಖರೀದಿ ಮಾಡಿ ಪಾರ್ಟಿ ಮತ್ತು ಇತರೆ ಮೋಜು-ಮಸ್ತಿಯ ಕೂಟಗಳಲ್ಲಿ ಬರುವ ಕಾಲೇಜು ವಿದ್ಯಾರ್ಥಿಗಳು, ಸಾಪ್ಟವೇರ್ ಇಂಜಿನಿರುಗಳಿಗೆ ನೀಡುತ್ತಿರುವುದಾಗಿ ತಿಳಿಸಿದ್ದು ಮಾರಾಟ ಮಾಡಲು ವಶದಲ್ಲಿ ಇಟ್ಟುಕೊಂಡಿದ್ದ 101 ಗ್ರಾಂ ಎಂ.ಡಿ.ಎಂ.ಎ ಮತ್ತು ಮಾರಾಟ ಮಾಡಲು ಬಳಸಿದ ಒಂದು ದ್ವಿ-ಚಕ್ರ ವಾಹನ ಆರೋಪಿಯ ಮೊಬೈಲ್ ಪೋನ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತದೆ.
ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಕೃಷ್ಣಕಾಂತ ರವರ ಮಾರ್ಗದರ್ಶನದಲ್ಲಿ ವಿ .ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾಗರಾಜ.ಜಿ ರವರ ಉಸ್ತುವಾರಿಯಲ್ಲಿ, ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸೆಕ್ಟರ್ ಶ್ರೀ.ಮಿರ್ಜಾ ಆಲಿ ರಜಾ ಹಾಗು ಸಿಬ್ಬಂದಿಯವರುಗಳು ಆರೋಪಿಯನ್ನು ಬಂಧಿಸಿ ಮಾಲನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು