ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿದೇಶಿ ಪ್ರಜೆಗಳು ನಿಷೇಧಿತ ಮಾದಕ ವಸ್ತು ಕೊಕೇನನ್ನು ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ, ದಾಳಿ ಕ್ರಮ ಜರುಗಿಸಿ, ಒಬ್ಬ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆತನ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.
ಆತನ ವಶದಿಂದ 23 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಕೊಕೇನ್, 238 ಗ್ರಾಂ ತೂಕದ ನಿಷೇಧಿತ ಕೊಕೇನ್ ಮಾದರಿಯ ಸಿಂಥೆಟಿಕ್ ಮಾದಕ ವಸ್ತು ₹ 57,000 ರೂ ನಗದು ಹಣ ಹಾಗೂ 2 ಮೊಬೈಲ್ ಫೋನ್ ಸೇರಿದಂತೆ ಒಟ್ಟು ಸುಮಾರು ₹ 5 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವರಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿರುತ್ತದೆ.
ಬೆಂಗಳೂರು ನಗರ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀಪ್ರಸಾದ್ ಬಿ.ಎಂ. ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಯಲಹಂಕ ಉಪ ವಿಭಾಗದ ಸಹಾಯಕ ಪೊಲಿಸ್ ಆಯುಕ್ತರಾದ ಶ್ರೀ ನರಸಿಂಹಮೂರ್ತಿ ರವರ ನೇತೃತ್ವದಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಶಿವಸ್ವಾಮಿ.ಸಿ.ಬಿ. ಹಾಗೂ ಸಿಬ್ಬಂದಿಯವರ ತಂಡ ದಾಳಿಕ್ರಮ ಜರುಗಿಸಿ, ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದು ಮಾಲನ್ನು ವರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಶಿಸಿರುತ್ತಾರೆ