ದಿನಾಂಕ:27.06.2023 ರಂದು ರಾತ್ರಿ 09.0 ಗಂಟೆಯಲ್ಲಿ ಕೋಣನಕುಂಟೆ ಪೊಲೀಸ್ ಠಾಣಾ ನಾರಾಯಣ ನಗರದಲ್ಲಿ, ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಕೋಣನಕುಂಟೆ ಪೊಲೀಸರು ಕೂಡಲೆ ಕಾರ್ಯ ಪ್ರವೃತ್ತರಾಗಿ, ಆ ಇಬ್ಬರು ಆಸಾಮಿಗಳನ್ನು ಹಿಡಿದುಕೊಂಡಿರುತ್ತಾರೆ. ಅವರುಗಳನ್ನು ವಿಚಾರಣೆ ಮಾಡಲಾಗಿ ಗಾಂಜಾ ಮಾರಾಟ ಮಾಡುವುದಾಗಿ ಒಪ್ಪಿಕೊಂಡ ಮೇರೆಗೆ ಅವರ ಬಳಿಯಿದ್ದ 5 ಕೆ.ಜಿ 700 ಗ್ರಾಂ ಗಾಂಜಾ, ಕೃತ್ಯಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನ, 12 ಮೊಬೈಲ್‌ಗಳು, 01 ಪೇ-ಟಿಎಂ ಮಿಷನ್, ಪ್ಲಾಸ್ಟಿಕ್ ಕವರ್‌ಗಳು ಹಾಗೂ ನಗದು ಹಣ 610/-
ರೂಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಸದರಿ ಗಾಂಜಾವನ್ನು ಕೋಲಾರದ ಒಬ್ಬ ಆಸಾಮಿಯು ಸರಬರಾಜು ಮಾಡಿರುವುದಾಗಿ ತಿಳಿಸಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್
ಆಯುಕ್ತರು ಪಿ. ಕೃಷ್ಣಕಾಂತ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಸುಬ್ರಮಣ್ಯಪುರ
ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಪವನ್ ರವರ ಉಸ್ತುವಾರಿಯಲ್ಲಿ ಕೋಣನಕುಂಟೆ
ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್, ಪಿ ರವರು ಹಾಗೂ ಪೊಲೀಸ್
ಸಿಬ್ಬಂದಿರವರುಗಳು ಆರೋಪಿತರನ್ನು ಬಂಧಿಸಿ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಮೇಲೆ ತಿಳಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಹಾಗೂ ಅಪರ ಪೊಲೀಸ್ ಆಯುಕ್ತರು, ಪಶ್ಚಿಮ, ರವರು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು