ಬ್ಯಾಟರಾಯನಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಹೊಸಗುಡದಹಳ್ಳಿ ಟ್ರಾಫಿಕ್ ಸಿಗ್ನಲ್ ಬಳಿ
ದಿನಾಂಕ:13-07-2023 ರಂದು KA-01-MT-2735 Polo Car ಅನ್ನು 4 ಜನ ಅಪರಿಚಿತ ಆಸಾಮಿಗಳು
ಮಾರಕಾಸ್ತ್ರದಿಂದ ಕಾರಿನಲ್ಲಿದ್ದ ವ್ಯಕ್ತಿಗೆ ಹಲ್ಲೆ ಮಾಡಿ, ಕಾರಿನ ಗ್ಲಾಸುಗಳನ್ನು ಒಡೆದು ಕಾರಿನ ಡಿಕ್ಕಿಯಲ್ಲಿದ್ದ
50,00,000/- ರೂ ನಗದು ಹಣವನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತತಾರೆ. ಈ ಬಗ್ಗೆ ಬ್ಯಾಟರಾಯನಪುರ
ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆರೋಪಿಗಳ ಪತ್ತೆಗೆ ತಂಡ ರಚಿಸಿ ಕೂಡಲೇ ಕಾರ್ಯಪ್ರವೃತ್ತರಾದ ಬ್ಯಾಟರಾಯನಪುರ ಪೊಲೀಸರು ಪ್ರಕರಣವನ್ನು ಬೇಧಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಆರೋಪಿಗಳ ಮಾಹಿತಿ ಮೇರೆಗೆ ಸುಲಿಗೆ ಮಾಡಿದ 44,00,000/- ರೂ ನಗದು ಹಣ, 2 ಮೊಬೈಲ್ ಫೋನ್‌ಗಳು, ಮಾರಕಾಸ್ತ್ರಗಳು ಹಾಗೂ ಕೃತ್ಯಕ್ಕೆ ಬಳಸಿದ Suzuki Access 125 KA-13-ES-3488 ದ್ವಿ-ಚಕ್ರ ವಾಹನವನ್ನು ಅಮಾನತ್ತು
ಪಡಿಸಿಕೊಂಡಿರುತ್ತಾರೆ.
ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಡಿ.ಸಿ.ಪಿ ಯವರಾದ ಮಾನ್ಯ ಶ್ರೀ ಲಕ್ಷ್ಮಣ ಬಿ ನಿಂಬರಗಿ, ಕೆಂಗೇರಿ ಗೇಟ್ ಉಪವಿಭಾಗದ ಎ.ಸಿ.ಪಿ. ಶ್ರೀ ಭರತ್ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನಿಂಗನಗೌಡ ಎ. ಪಾಟೀಲ ರವರ ನೇತೃತ್ವದಲ್ಲಿ ಹಾಗೂ ಸಿಬ್ಬಂಧಿಯವರುಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾರಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ಶ್ರೀ. ಎನ್.ಸತೀಶ್ ಕುಮಾರ್ ರವರು ಪ್ರಶಂಸಿರುತ್ತಾರೆ.