ನಮ್ಮ ಬೆಂಗಳೂರು ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಪ್ತಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಚಿನ್ನಭಾರಣಗಳು, ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಹಿಡಿದ್ದಿದ್ದಾರೆ.
ಮೈಕೋಲೇಔಟ್ ಪೊಲೀಸ್ ಠಾಣಾ ಲಿಮಿಟ್ ವ್ಯಾಪ್ತಿಯ ಮನೆಗಳ ಬೀಗ ಮುರಿದು ಚಿನ್ನದ ವಡವೆಗಳನ್ನು ಕಳ್ಳತನ ಮಾಡಿ, ಅವುಗಳನ್ನು ಮಾರಾಟ ಮಾಡಿ ಬಂದ ಹಣದಿಂದ ತನಗೆ ಇದ್ದ ದುಶ್ಚಟಗಳಿಗೆ ಹಾಗೂ ಆನ್‌ಲೈನ್ ಬೆಟ್ಟಿಂಗ್‌ಗೆ ಉಪಯೋಗಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಕೊಂಡಿರುತ್ತಾರೆ. ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು ₹30,15,000/- (ಮೂವತ್ತು ಲಕ್ಷದ ಹದಿನೈದು ಸಾವಿರ ರೂಪಾಯಿ) ಬೆಲೆ ಬಾಳುವ 525 ಗ್ರಾಂ ತೂಕದ ಚಿನ್ನದ ವಡವೆಗಳು, 550 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ 2 ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಿಂದ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಒಟ್ಟು 11 ಮನೆ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಕಾರ್ಯಾಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಸಿ.ಕೆ.ಬಾಬಾ ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಮತ್ತು ಮೈಕೋ ಲೇಔಟ್ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ.ಮನೋಜ್, ನೇತೃತ್ವದಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಎಂ.ಎಲ್.ಗಿರೀಶ್ ಹಾಗೂ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ ಆಂಥೋನಿ ಬೇಗೂರು