ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಪೊಲೀಸ್ ಮತ್ತು ಅಭಿಯೋಜನಾ ಇಲಾಖೆ ಸಂಯುಕ್ತಾಶ್ರಯದಲ್ಲಿ M.M.R.D ಕಾಯ್ದೆ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಹಾಗೂ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ.ರಾಘವೇಂದ್ರ ಡಿ ಹುದ್ದಾರ್ ರವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಹೊಸಮನಿ ಪುಂಡಲೀಕ ರವರು , ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ.ದೇವರಾಜ ಭೂತವರವರು ಹಾಜರಿದ್ದರು.ವಿಶೇಷ ಉಪನ್ಯಾಸವನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಭಿಯೋಜಕರಾದ ಶ್ರೀ.ಆನಂದ್ ಕುಮಾರ್ ರವರು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಸಿ.ಬಿ.ರಿಷ್ಯಂತ್,ಐಪಿಎಸ್ ರವರು ವಹಿಸಿದ್ದು,ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ.ಆರ್.ಶಿವಕುಮಾರ್ ಹಾಗೂ ಜಿಲ್ಲೆಯ ಹಿರಿಯ ಕಿರಿಯ ಅಧಿಕಾರಿಗಳು ಹಾಜರಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್