ಮೈಸೂರು ಚಾಮರಾಜನಗರ ಜಿಲ್ಲಾ ಪೊಲೀಸ್ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಸಂಘದ ಅಧ್ಯಕ್ಷರಾದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರು ಉದ್ಘಾಟಿಸಿದರು. ಇದೇ ವೇಳೆ ಕರ್ತವ್ಯದಿಂದ ನಿವೃತ್ತರಾದ ಅಧಿಕಾರಿ ಸಿಬ್ಬಂದಿಗಳನ್ನು ಬೀಳ್ಕೋಟ್ಟು, ನಿವೃತ್ತಿ ಹೊಂದಿದ್ದಂತಹ ಅಧಿಕಾರಿ ಸಿಬ್ಬಂದಿಗಳನ್ನು ಸಂಘದ ವತಿಯಿಂದ ಅಭಿನಂದಿಸಿದರು. ಅಲ್ಲದೆ ಕ್ರೀಡೆ ವಿದ್ಯಾಭ್ಯಾಸಗಳಲ್ಲಿ ಉತ್ತಮ ಸಾಧನೆಗೈದಿರುವ ಅಧಿಕಾರಿ ಸಿಬ್ಬಂದಿಗಳ ಮಕ್ಕಳನ್ನು ಪ್ರೋತ್ಸಾಹಿಸಿ ಸನ್ಮಾನಿಸಲಾಯಿತು.ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ.ಆರ್. ಶಿವಕುಮಾರ್ ರವರು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕುಟುಂಬಸ್ಥರು ಹಾಜರಿದ್ದರು.ಸಂಘದ ಉಪಾಧ್ಯಕ್ಷ ಶ್ರೀ.ಕಾಳಪ್ಪನಾಯಕ ರವರು, ನಿರ್ದೇಶಕರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
