ಮೈಸೂರಿನಲ್ಲಿ ವಾಹನ ತಪಾಸಣೆ ವೇಳೆ ಅಪಘಾತ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಡಿಸಿಪಿ ಪ್ರಕಾಶ್ಗೌಡ ಮಾಹಿತಿ ನೀಡಿದ್ರು.
ವಿಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ 8 ಮಂದಿಯನ್ನು ಬಂಧಿಸಲಾಗಿದೆ. ಇನ್ನು 6 ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿನ ವಿಡಿಯೋ ದೃಶ್ಯಾವಳಿ ಆಧರಿಸಿ ಹಲ್ಲೆ ಮಾಡಿರುವವರ ಗುರುತು ಪತ್ತೆ ಮಾಡಲಾಗುತ್ತಿದೆ. ಘಟನೆ ಸಂಬಂಧ 3 ಕೇಸ್ ದಾಖಲಾಗಿದ್ದು, ವಾಹನ ಜಖಂ ಒಂದು ಕೇಸ್, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಯ ಒಂದು ಕೇಸ್, ದೇವರಾಜ್ ಕುಟುಂಬದಿಂದ ಒಂದು ಕೇಸ್ ದಾಖಲಾಗಿದೆ. ಇನ್ನು ಟಿಪ್ಪರ್ ಚಾಲಕ ಹಾಗೂ ಕ್ಲೀನರ್ ಸಹ ಪೊಲೀಸರ ವಶದಲ್ಲಿದ್ದು, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ರು
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್