ಬೆಂಗಳೂರು ನಗರದ ಪಶ್ಚಿಮ ವಿಭಾಗದ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಯು ತಾನು ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ ಸುಮಾರು 10 ಮೊಬೈಲ್ ಪೋನ್ಗಳ ಬಗ್ಗೆ ಮಾಹಿತಿ ನೀಡಿದ್ದು, ಸದರಿ ಮೊಬೈಲ್ಗಳನ್ನು ವಶಪಡಿಸಿಕೊಳ್ಳ ಲಾಗಿರುತ್ತದೆ. ಇದರ ಮೌಲ್ಯ ರೂ.70,000/-.
ಈ ಕಾರ್ಯಾಚರಣೆಯನ್ನು ಡಿಸಿಪಿ ಪಶ್ಚಿಮ ವಿಭಾಗ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.