ಬೆಂಗಳೂರು ನಗರದ ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ: 31.01.2024
ರಂದು ಪಿರಾದುದಾರರು ಬಿ.ಎಂ.ಟಿ.ಸಿ ಬಸ್ಸು ಹತ್ತುವಾಗ ಯಾರೋ ಕಳ್ಳರು ಮೊಬೈಲ್ ಫೋನ್ ಅನ್ನು
ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ದೂರನ್ನು
ನೀಡಿರುತ್ತಾರೆ.
ಮೊಬೈಲ್ ಫೋನ್ ಕಳ್ಳತನ ಪ್ರಕರಣವನ್ನು ದಾಖಲು ಮಾಡಿಕೊಂಡ ಪೊಲೀಸರು, ಈ ಪ್ರಕರಣದ ತನಿಖೆಯನ್ನು ಕೈಗೊಂಡು, ದಿನಾಂಕ:29-05-2024 ರಂದು ಮಾರತ್ತಹಳ್ಳಿ ಬ್ರಿಡ್ಜ್ ಹತ್ತಿರ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಲಾಗಿ, ತಾನು ಮತ್ತು ಸಹಚರನು ಇಬ್ಬರು ಫೋನ್ ಕಳ್ಳತನ ಮಾಡಿರುವುದಾಗಿ ತಪ್‌ಪಿಕೊಂಡಿರುತ್ತಾನೆ. ನಂತರ ಆತನ ವಶದಲ್ಲಿದ್ದ ₹2.00.000/- ಬೆಲೆ ಬಾಳುವ ವಿವಿಧ ಕಂಪನಿಯ 09 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಇನ್ನೋರ್ವ ವ್ಯಕ್ತಿಯ ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ವಶಕ್ಕೆ ಪಡೆದಿದ್ದ ಓರ್ವ ವ್ಯಕ್ತಿಯನ್ನು ದಿನಾಂಕ 30/05/2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಲಾಗಿ, ಮಾನ್ಯ ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತೆ.
ಬೆಂಗಳೂರು ನಗರ ವೈಟ್ ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ: ಶಿವಕುಮಾರ್, ಐಪಿಎಸ್ ಮತ್ತು ಮಾರುತಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಮತಿ ಪ್ರಿಯದರ್ಶಿನಿ ಸಾನಿಕೊಪ ಕೆಎಸ್‌ಪಿಎಸ್ ರವರ ಮಾರ್ಗದರ್ಶನದಲ್ಲಿ ಹೆಚ್.ಎ.ಎಲ್ ಪೊಲೀಸ್
ಠಾಣೆಯ ಪೊಲೀಸ್ ಇನ್ಸ್‌ಪೆಕರ್ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಪಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.