ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರಹಳ್ಳಿ ಸರ್ಕಲ್ ಹತ್ತಿರ ದಿನಾಂಕ 30-04-2023 ರಂದು ಬೆಳಗಿನ ಜಾವ 4-30 ಗಂಟೆ ಸಮಯದಲ್ಲಿ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿರುವಾಗ, ಯಾರೋ 3 ಜನ ಅಪರಿಚಿತ ವ್ಯಕ್ತಿಗಳು ಹಿಂಬದಿಯಿಂದ ದ್ವಿಚಕ್ರವಾಹನದಲ್ಲಿ ಬಂದು ಏಕಾಏಕಿ ಪಿರಾದಿಯ ಕೈನಲ್ಲಿದ್ದ ಸುಮಾರು 1.20,000/- ಬೆಲೆ ಬಾಳುವ ಮೋಟೋ ಜಿ ಮೊಬೈಲ್ ಫೋನನ್ನು ಕಿತ್ತುಕೊಂಡು ಹೋಗಿರುತ್ತಾರೆಂದು, ನೀಡಿದ ದೂರಿನ ಮೇರೆಗೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಪತ್ತೆ ಕಾರ್ಯ ಕೈಗೊಂಡ ಪೊಲೀಸರು ಕೃತ್ಯ ನಡೆದ ಸ್ಥಳದ ಅಕ್ಕಪಕ್ಕವಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕೃತ್ವದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಚಹರೆಗಳನ್ನು ಸಂಗ್ರಹಿಸಿ, 3 ಜನ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು, ಸುಲಿಗೆಯಾಗಿದ 720,000/- ಬೆಲೆ ಬಾಳುವ ಮೋಟೋ ಜಿ ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ್ದ -ದ್ವಿಚಕ್ರ ವಾಹನವನು. ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಪ್ರಕರಣದಲ್ಲಿ ವಶಕ್ಕೆ ಪಡೆದ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಅವರುಗಳು ದುಷ್ಟಟಗಳ ವ್ಯಸನಿಗಳಾಗಿದ್ದು, ದೈನಂದಿನ ವೆಚ್ಚದ ಹಣ ಭರಿಸಲು ಈ ಕೃತ್ಯವೆಸಗಿರುವುದಾಗಿ ತಿಳಿದು ಬಂದಿರುತ್ತದೆ.
ಬೆಂಗಳೂರು ನಗರ, ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಸೈದುಲ್ಲು ಅಡಾವತ್ ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಶ್ರೀ ಹೆಚ್. ಕೃಷ್ಣಮೂರ್ತಿ, ಎಸಿಪಿ ಮಲ್ಲೇಶ್ವರಂ ಉಪ ವಿಭಾಗ ಮತ್ತು ಶ್ರೀ ಮಂಜು ಹೆಚ್.ಎ. ಪೊಲೀಸ್ ಇನ್ಸ್ ಪೆಕರ್, ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣೆ ರವರು ಮತ್ತು ಸಿಬ್ಬಂದಿಯವರುಗಳು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.