ಉಡುಪಿ: ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ನಡೆಯುತ್ತಿದ್ದು ಈ ವೇಳೆ PSI ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ.
ಕುಂದಾಪುರ ಗ್ರಾಮಾಂತರ ಠಾಣೆ ನಾಸಿರ್ ಹುಸೇನ್ ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ PSI
ಉಡುಪಿಯಲ್ಲಿ ಪೊಲೀಸ್ ಇಲಾಖೆ ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ವೇಳೆ ಉಡುಪಿಯ ತಾ.ಪಂ. ಮುಂಭಾಗದ ರಸ್ತೆಯಲ್ಲಿ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್ ಐ ನಾಸಿರ್ ಹುಸೇನ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಾಸಿರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ.
ನಾಸೀರ್ ಹುಸೇನ್ ಅವರು, ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಅಮಾಸೆಬೈಲು, ಕುಂದಾಪುರ, ಬೈಂದೂರು, ಕೊಲ್ಲೂರು, ಶಂಕರನಾರಾಯಣದಲ್ಲಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಗ್ರಾಮಾಂತರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







