ಜೆ.ಪಿ.ನಗರ ಪೊಲೀಸ್ ಠಾಣಾ ಸರಹದ್ದಿನ ಜಲಮಂಡಳಿ ಸೇವಾ ಠಾಣೆಯ ಯುಪಿಎಸ್ ಗೆ ಆಳವಡಿಸಿದ್ದ, 05 ಬ್ಯಾಟರಿಗಳು ಕಳುವಾದ ಬಗ್ಗೆ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ದಿನಾಂಕ:-08/07/2023 ರಂದು 03 ಜನ ಆರೋಪಿಗಳನ್ನು ಬಂಧಿಸಿ, ಅವರು ನೀಡಿದ ಮಾಹಿತಿ ಮೇರೆಗೆ, ಬೆಂಗಳೂರು ನಗರದ ವಿವಿಧ ಕಡೆಯಲ್ಲಿ ಕಳ್ಳತನ ಮಾಡಿದ್ದ. ಒಟ್ಟು 52 ಬ್ಯಾಟರಿಗಳನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಮೌಲ್ಯ 8,00,000/-.
ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್, ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಕೆ.ಪಿ.ಶ್ರೀನಿವಾಸ ರವರುಗಳ ಮಾರ್ಗದರ್ಶನದಲ್ಲಿ ಜೆ.ಪಿ.ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಟಿ.ಎಸ್.ರಾಧಾಕೃಷ್ಣ ರವರ ನೇತೃತ್ವದ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ಮತ್ತು
ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್, ರವರು ಶ್ಲಾಘಿಸಿರುತ್ತಾರೆ.