ಬಸವನಗುಡಿ ಪೊಲೀಸ್ ಠಾಣಾ ಸರಹದ್ದಿನಲ್ಲಿ, ದಿನಾಂಕ: 12.02.2024 ರಂದು ದ್ವಿ-ಚಕ್ರ ವಾಹನ ಕಳುವು ಪ್ರಕರವೊಂದು ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಮುಂದುವರೆಸಿದ್ದು, ದಿನಾಂಕ: 17/05/2024 ರಂದು ನಾಗಸಂದ್ರ ಸರ್ಕಲ್ ಬಳಿ ಓರ್ವ ಎಂ.ಓ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಯಿತು.
ವಶಕ್ಕೆ ಪಡೆದ ಎಂ.ಓ ವ್ಯಕ್ತಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆತನು ಬಸವನಗುಡಿಯಲ್ಲಿ ದ್ವಿ-ಚಕ್ರ ವಾಹನ ಕಳುವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ನಂತರ ಆತನನ್ನು ದಿನಾಂಕ:17/05/2024 ರಂದು ಮಾನ್ಯ ನ್ಯಾಯಲಯಕ್ಕೆ ಹಾಜರಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ತನಿಖೆಯನ್ನು ಮುಂದುವರೆಸಿ, ಬಸವನಗುಡಿ ಪೊಲೀಸ್ ಠಾಣೆಗೆ ಸಂಬಂಧಿಸಿದ ದ್ವಿ-ಚಕ್ರ ವಾಹನ ಪ್ರಕರಣವು ಸೇರಿದಂತೆ, ಹಲಸೂರು, ಮೈಸೂರು ನಗರದ ಅಲನಹಳ್ಳಿ, ಹಾಸನ ಜಿಲ್ಲೆಯ ಪೆನ್ನನ್ ಮೋಹಲ್ಲಾ ಹಾಗೂ ಆಂಧ್ರಪ್ರದೇಶ್ ರಾಜ್ಯದ ಅಲಿಪಿರಿ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆತನಿಂದ ಕೆ 8.70 ಲಕ್ಷ ಮೌಲ್ಯದ 75 ಗ್ರಾಂ ತೂಕದ ಚಿನ್ನದ ಆಭರಣಗಳು 49 ಕೆ.ಜಿ ತೂಕದ ಬೆಳ್ಳಿ ಪದಾರ್ಥಗಳು, 1 ಡಿಜಿಟಲ್ ಲಾಕರ್ ಹಾಗೂ 3 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ.ಲೊಕೇಶ್ ಜಗಲಾಸ, ಐ.ಪಿ.ಎಸ್ ಮತ್ತು ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ ವಿ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮತಿ.ಸವಿತ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.