ವರ್ತೂರು ಪೊಲೀಸ್ ಠಾಣಾ ಸರಹದ್ದಿನ ಸಾಯಿ ರೆಸಿಡೆನ್ಸಿಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:31/03/2024 ರಂದು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:29/03/2024 ರಂದು ಬೆಳಗ್ಗೆ ಮನೆಯ ಬಾಗಿಲು ಬೀಗ ಹಾಕಿಕೊಂಡು ಕುಟುಂಬ ಸಮೇತರಾಗಿ ಸಂಬಂಧಿಕರ ಮನೆಗೆ ಹೋಗಿದ್ದು, ದಿನಾಂಕ:31/03/2024 ರಂದು ವಾಪಸ್ ಮನೆಗೆ ಬಂದು ನೋಡಲಾಗಿ, ಯಾರೋ ಕಳ್ಳರು ಮನೆಯ ಬಾಲ್ಕನಿಯಲ್ಲಿರುವ ಸೈಡ್ ಡೋರ್‌ನ್ನು ಹೊಡೆದು ಒಳ ಪ್ರವೇಶಿಸಿ ಕೊಠಡಿಯ ಬೀರುವಿನಲ್ಲಿಟ್ಟಿದ್ದ 20 ಗ್ರಾಂ ತೂಕದ ಚಿನ್ನಾಭರಣವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ವೈಟ್ ಫೀಲ್ಡ್ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಭಾಗಿಯಾಗಿ, ನ್ಯಾಯಾಂಗ ಬಂಧನದಲ್ಲಿರುವ ಓರ್ವ ಆರೋಪಿಯನ್ನು ದಿನಾಂಕ:19/08/2024 ರಂದು ಬಾಡಿ ವಾರೆಂಟ್ ಮೂಲಕ ಕರೆತಂದು, ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತಪ್‌ಪಿಕೊಂಡಿರುತ್ತಾನೆ.
ಪ್ರಕರಣದಲ್ಲಿ ಕಳವು ಮಾಡಿದ್ದ ಚಿನ್ನಾಭರಣಗಳನ್ನು ವರ್ತೂರು ಪೊಲೀಸ್ ಠಾಣಾ ಸರಹದ್ದಿನ ಕೊಡತ್ತಿಗ್ರಾಮದ ಜ್ಯೂವೆಲರಿ ಶಾಪ್‌ನಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ದಿನಾಂಕ:21/08/2024 ರಂದು 20 ಗ್ರಾಂ ತೂಕದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಮೌಲ್ಯ 1.20,000/- (ಒಂದು ಲಕ್ಷದ ಇಪತ್ತು ಸಾವಿರ ರೂಪಾಯಿ).
ದಿನಾಂಕ:23/08/2024 ರಂದು ಬಾಡಿ ವಾರೆಂಟ್ ಮೂಲಕ ಕರೆತಂದಿದ್ದ ಆರೋಪಿಯನ್ನು ವಾಪಸ್ ಕಾರಾಗೃಹಕ್ಕೆ ಬಿಡಲಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಫೀಲ್ಡ್ ಡಾ.ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ಮಾರತಹಳ್ಳಿ ಉಪ ವಿಭಾಗ ಶ್ರೀಮತಿ ಪ್ರಿಯದರ್ಶಿನಿ ಈಶ್ವರ್ ಸಾಣೇಕೊಪ್ಪ ರವರ ಮಾರ್ಗದರ್ಶನದಲ್ಲಿ ವರ್ತೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.