ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ಆಚರಿಸುತ್ತಿದ್ದು, ಈ ಪ್ರಯುಕ್ತ ಧ್ವಜಾರೋಹಣಾ ಕಾರ್ಯಕ್ರಮ ನಡೆಸುವುದಾಗಿದೆ. ರಾಷ್ಟ್ರಧ್ವಜವನ್ನು ನಿಗದಿಪಡಿಸಿದ ಅಳತೆ/ನಮೂನೆ ಯಲ್ಲಿಯೇ ತಯಾರಿಸಬೇಕಾಗಿದ್ದು, ಯಾವುದೇ ಕಾರಣಕ್ಕೂ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸುವುದು ಕಾನೂನು ಬಾಹಿರವಾಗಿರುತ್ತದೆ.
ಕಾಗದ, ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜವನ್ನು ಉಪಯೋಗಿಸಿ ಎಸೆಯುವ ಸಂಭವವಿರುವುದರಿಂದ ರಾಷ್ಟ್ರಧ್ವಜವನ್ನು ಪ್ಲಾಸ್ಟಿಕ್, ಕಾಗದಗಳಲ್ಲಿ ತಯಾರಿಸುವುದು, ಮಾರಾಟ ಮಾಡುವುದ್ದನ್ನು ನಿಷೇಧಿಸಲಾಗಿದೆ. ಆದುದರಿಂದ ಪ್ಲಾಸ್ಟಿಕ್ ಮತ್ತು ಕಾಗದದಲ್ಲಿ ತಯಾರಿಸಿದ ರಾಷ್ಟ್ರಧ್ವಜದ ಉಪಯೋಗ ನಿಷೇದಿಸಲಾಗಿದ್ದು, ಬಳಸಿದವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು.
ಅದೇ ರೀತಿ ಮಾಸ್ಕ್ ನಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸುವುದು, ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದಂತಾಗುವುದರಿಂದ ರಾಷ್ಟ್ರಧ್ವಜವಿರುವ ಮಾಸ್ಕ್ ಬಳಸುವುದ್ದನ್ನು ಕೂಡ ನಿರ್ಬಂಧಿಸಲಾಗಿದೆ.ಮೇಲ್ಕಂಡ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,