ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ, ದಿನಾಂಕ:01/02/2024 ರಂದು ರಾತ್ರಿ ವೇಳೆಯಲ್ಲಿ ಮನೆಯೊಂದರ ಬಾಗಿಲನ್ನು ಮುರಿದು, ಮನೆಯಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳನ್ನು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ತನಿಖೆ ಕೈಗೊಂಡ ಪೊಲೀಸರು ದಿನಾಂಕ:-09.02.2024 ರಂದು ಓರ್ವ ರೂಢಿಗತ ಕನ್ನ ಕಳವು ಮಾಡುವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಯಿತು. ಆತನನ್ನು ಸುದೀರ್ಘ ವಿಚಾರಣೆ ನಡೆಸಿದ ನಂತರ, ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಒಂದು ರಾತ್ರಿ ಕನ್ನ ಕಳವು ಪ್ರಕರಣ, ಹೆಣ್ಣೂರು ಪೊಲೀಸ್ ಠಾಣೆಯ ಕಳವು ಪ್ರಕರಣ, ಬಾಣಸವಾಡಿ ಹಾಗೂ ಹೆಚ್.ಎ.ಎಲ್ ಪೊಲೀಸ್ ಠಾಣೆಯ ಎರಡು ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಈ ರೂಢಿಗತ ಕಳುವು ಮಾಡುವ ವ್ಯಕ್ತಿಯಿಂದ ಒಟ್ಟು 132 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಮೌಲ್ಯ 7,78,800/-(ಏಳು ಲಕ್ಷದ ಎಪ್ಪತ್ತೆಂಟು ಸಾವಿರದ ಎಂಟುನೂರು ರೂಪಾಯಿ).
ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಡಿ.ದೇವರಾಜ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಟಿ.ರಂಗಪ್ಪ ರವರ ನೇತೃತ್ವದಲ್ಲಿ, ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟ ಹಾಗೂ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.