ಬೆಂಗಳೂರು ನಗರದ ಪಶ್ಚಿಮ ವಿಭಾಗದ ಕಾಟನ್ ಪೇಟೆ ಪೊಲೀಸ್ ಠಾಣೆ ಹಾಗೂ ವಿವಿಧ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ 3 ಜನ ವ್ಯಕ್ತಿಗಳನ್ನು ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದು, ಸುಮಾರು 22,30,000/-ರೂ ಬೆಲೆ ಬಾಳುವ 31 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ.
ಕಾಟನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನ ಕಳುವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ವಿಶೇಷ ತಂಡವನ್ನು ರಚಿಸಿ ಠಾಣಾ ಸರಹದ್ದಿನಲ್ಲಿ ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜಿಸಿದ್ದು, ತಂಡವು ವಿಶೇಷ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ 3 ಜನರ ತಂಡವೊಂದು ಠಾಣಾ ವ್ಯಾಪ್ತಿಯಲ್ಲಿ ವಾಹನ ಕಳವು ಮಾಡಿ ಬೇರೆ ಕಡೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಯನ್ನು ಖಚಿತ ಪಡಿಸಿಕೊಂಡು, ವ್ಯಕ್ತಿಗಳ ಬಗ್ಗೆ ನಿಗಾವಹಿಸಿದ್ದು, ದಿನಾಂಕ:-02-10-2023 ರಂದು ಸಂಜೆ ಸಮುಯದಲ್ಲಿ ಮೂರು ಜನ ವ್ಯಕ್ತಿಗಳು ಕಳುವಾಗಿದ್ದ ವಾಹನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ವಾಹನದೊಂದಿಗೆ 3 ಜನ ವ್ಯಕ್ತಿಗಳನ್ನು ವಶಕ್ಕೆಪಡಿಸಿಕೊಂಡು, ದಸ್ತಗಿರಿಮಾಡಿ, ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದಾಗ ಹಲವಾರು ತಿಂಗಳುಗಳಿಂದ ಕೋಲಾರದ ಮುಳಬಾಗಿಲಿನಿಂದ ಬಸ್ ಮೂಲಕ ಬೆಂಗಳೂರಿನ ಮೆಜೆಸ್ಟಿಕ್ ಬಳಿ ಬಂದು, ರಾತ್ರಿ ಸಮುಯದಲ್ಲಿ ಕಾಟನ್ ಪೇಟೆ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್ ಚಾಮರಾಜಪೇಟೆ, ಹೆಬ್ಬಾಳ ಹಾಗೂ ಇತರ ಪ್ರದೇಶಗಳಲ್ಲಿ ವಾಹನಗಳನ್ನು ಕಳವು ಮಾಡಿಕೊಂಡು ಕೋಲಾರದ ಮುಳಬಾಗಿಲಿಗೆ ವಾಹನಗಳನ್ನು ಕದ್ದೊಯ್ಯುತ್ತಿದ್ದುದ್ದಾಗಿ ಮಾಹಿತಿ ನೀಡಿರುತ್ತಾರೆ. ವ್ಯಕ್ತಿಗಳು….ಹೇಳಿಕೆ ಮೇರೆಗೆ 22,30,000/-ರೂ ಮೌಲ್ಯದ ಒಟ್ಟು 31 ದ್ವಿ-ಚಕ್ರ ವಾಹನಗಳನ್ನು ವಶ ಪಡಿಸಿಕೊಂಡಿರುತ್ತದೆ.
ಆರೋಪಿಗಳ ಬಂಧನದಿಂದ ಕಾಟನ್ ಪೇಟೆಯ 6 ದ್ವಿಚಕ್ರ ವಾಹನ ಕಳವು ಪ್ರಕರಣಗಳು, ಹಾಗೂ ಒಂದು ಮನೆ ಕಳವು ಪ್ರಕರಣ ಬೆಳಕಿಗೆ ಬಂದಿರುತ್ತದೆ. ಮತ್ತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2 ಪರಣ, ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 2 ಪರಣ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ 2 ವಾಹನ ಕಳವು ಪ್ರಕರಣಗಳು ಹಾಗೂ ಹೆಬ್ಬಾಳ, ಹಲಸೂರು, ಕೋಲಾರ ಟೌನ್ ಶ್ರೀನಿವಾಸಪುರ ಪೊಲೀಸ್ ಠಾಣೆಗಳಲ್ಲಿ ಉಳಿದ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 31 ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಶ್ರೀ ಗಿರೀಶ್ ಎಸ್. ಉಪ ಪೊಲೀಸ್ ಆಯುಕ್ತರು, ಪಶ್ಚಿಮ ವಿಭಾಗ ರವರ ಮಾರ್ಗದರ್ಶನದಲ್ಲಿ, ಶ್ರೀ ರಮೇಶ್ ಕೆ.ಎಂ. ಸಹಾಯಕ ಪೊಲೀಸ್ ಆಯುಕ್ತರು ಚಿಕ್ಕಪೇಟೆ ಉಪ-ವಿಭಾಗ ರವರ ನೇತೃತ್ವದಲ್ಲಿ, ಕಾಟನ್ ಪೇಟೆಯ ಪೊಲೀಸ್ ಬಾಲ ಬಿಚ್ ಸಿಬ್ಬಂದಿಯವರೊನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ, ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.