ದಿನಾಂಕ: 06.12.2023 ಮತ್ತು ದಿ:08.12.2023 ರಂದು ಸಿಸಿಬಿ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಕಾನೂನು ಬಾಹಿರವಾಗಿ ವಿದೇಶಿ ಸಿಗರೇಟ್‌ಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಕೋಣನಕುಂಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಶಾಪ್ ನಂ:513, ಭುವನೇಶ್ವರಿ ನಗರ, ಜೆಪಿ ನಗರ 7ನೇ ಹಂತ, ಪುಟ್ಟೇನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಇಂದ್ರಪ್ರಸ್ಥ ಬಿಲ್ಡಿಂಗ್, ಗುಬ್ಬಿ ಕ್ರಾಸ್ ಮತ್ತು ಕೊತ್ತನೂರು ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಅಂಗಡಿ ಪಾಪಣ್ಣ ಸರ್ಕಲ್ ನಾರಾಯಣಾಪುರ ಮೈನ್ ರೋಡ್ ನಲ್ಲಿ ಕ್ರಮವಾಗಿ ದಾಳಿ ನಡೆಸಿ ವಿದೇಶಿ ಸಿಗರೇಟ್ ಮಾರಾಟ ಮಾಡುತ್ತಿದ್ದ 06 ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
Ddun hillnana, esse lughts, diarum black, gold tip. gold flake king (copy) gold flake king light, black djaram, garam, gold frake, king ಹೆಸರಿನ ಒಟ್ಟು ₹ 4,04,990 ಮೌಲ್ಯದ ವಿದೇಶಿ ಸಿಗರೇಟ್‌ಗಳನ್ನು ವಶಕ್ಕೆ ಪಡಿಸಿಕೊಂಡಿರುತ್ತಾರೆ.
ಈ ಸಂಬಂಧ ಆರೋಪಿಗಳ ವಿರುದ್ಧ ಕೋಣನಕುಂಟೆ, ಪುಟ್ಟೇನಹಳ್ಳಿ ಮತ್ತು ಕೊತ್ತನೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತದೆ.
ಈ ಕಾರ್ಯಾಚರಣೆಯನ್ನು ಸಿ.ಸಿ.ಬಿ, ಆರ್ಥಿಕ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.