ವಿದ್ಯಾರಣ್ಯಪುರದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿರುವ ಘಟನೆಗಳು ಹೆಚ್ಚಿವೆ. ಇದೀಗ, ಈ ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಈ ಗ್ಯಾಂಗ್ ಸದಸ್ಯರು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಣ ವಸೂಲಿ ಮಾಡುತ್ತಿದ್ದರು ಮತ್ತು ಆ ಪ್ರದೇಶದಲ್ಲಿ ಓಡಾಡುವ ಒಂಟಿ ಮಹಿಳೆಯರಿಂದ ಆಭರಣಗಳನ್ನು ಕಸಿದುಕೊಳ್ಳುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಪಾದರಾಯನಪುರದಲ್ಲಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ರೌಡಿ ತಂಡದ ಸದಸ್ಯರನ್ನು ಬಂಧಿಸಲಾಗಿದೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್