ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ. ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿರುವ ತತ್ವಾಗಿದೆ. ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ. ಇಂಥ ಸಮಸ್ಯೆಗಳನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಪ್ರೋತ್ಸಾಹಿಸಲು , ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ಕಿತ್ತುಹಾಕಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತದೆ.
ಸೆಂಟ್ ಫಿಲೋಮಿನಾ ಹೈಸ್ಕೂಲ್ , ಅತ್ತಿಬೆಲೆಯಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಆಚರಿಸಲಾಯಿತು .ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ( ಬೆಂಗಳೂರು ನಗರ ಜಿಲ್ಲೆ ) , ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ- ದೆಹಲಿ ವತಿಯಿಂದ ಕಾರ್ಯಕ್ರಮ ಉದ್ಘಾಟನೆ ನಡೆಸಲಾಯಿತು .
ಅತ್ತಿಬೆಲೆ ಠಾಣೆ ಇನ್ಸ್ ಪೆಕ್ಟರ್ ಶ್ರೀ .ಕೆ ವಿಶ್ವನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು .ವಿಶ್ವ ಸಾಮಾಜಿಕ ನ್ಯಾಯ ದಿನದ ಕುರಿತು ಸಂತ ಫಿಲೋಮಿನಾ ಹೈಸ್ಕೂಲ್ ಮಕ್ಕಳಿಗೆ ಅರಿವು ಮೂಡಿಸಿದರು. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಮತ್ತು ಶ್ರೀ .ಕನಕದಾಸ ಅವರ ಸಾಧನೆಗಳ ಬಗ್ಗೆ ಹೆಚ್ಚಾಗಿ ಮಾತನಾಡಿ ಮಕ್ಕಳಿಗೆ ಅದೇ ರೀತಿ ಕಾನೂನನ್ನು ಮತ್ತು ಅವರ ಸ ಹಕ್ಕುಗಳನ್ನು ಹೇಗೆ ಬಳಸುವಂತೆ ತಿಳುವಳಿಕೆ ನೀಡಿದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,