ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಡಾ.ವೈ.ಎಸ್.ರವಿಕುಮಾರ, ಐ.ಪಿ.ಎಸ್. ರವರು ಕಚೇರಿಯ ಸಿಬ್ಬಂದಿಗಳಿಗೆ ಸದ್ಭಾವನಾ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಐ.ಪಿ.ಎಸ್(ಕಾ&ಸು)ರವರು ಹಾಗೂ ಕಛೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.
ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ
ಜಾತಿ ಧರ್ಮ ಪ್ರದೇಶ ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ .ಅಲ್ಲದೆ ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡುತ್ತೇನೆ .
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,