ಬೆಂಗಳೂರು ನಗರದ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಸರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪತ್ತೆಮಾಡಿ, ದಸ್ತಗಿರಿ ಮಾಡಿ, ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸುಮಾರು 5.5 ಲಕ್ಷ ರೂ ಬೆಲೆ ಬಾಳುವ 94.81 ಗ್ರಾಂ ತೂಕದ ಚಿನ್ನದ ಸರಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದೆ ಒಂದು ಹೊಂಡಾ ಆಕ್ಟಿವಾ ದ್ವಿಚಕ ವಾಹನವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
ಈ ಕಾರ್ಯಾಚರಣೆಯಿಂದ ಬೆಂಗಳೂರು ನಗರದ ಚಾಮರಾಜಪೇಟೆ ಪೊಲೀಸ್ ಠಾಣೆ ಮತ್ತು ಸುಬ್ರಮಣ್ಯಪುರ ಠಾಣೆಯ ತಲಾ ಒಂದೊಂದು ಸರ ಅಪಹರಣ ಪ್ರಕರಣಗಳು ಮತ್ತು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣ ಸಹ ಪತ್ತೆಯಾಗಿರುತ್ತದೆ. ತನಿಖೆ ಮುಂದುವರೆಸಿರುತ್ತದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್
ಆಯುಕ್ತರಾದ ಶ್ರೀ ಲಕ್ಷ್ಮಣ್ ನಿಂಬರ್ಗಿ ರವರ ಸೂಕ್ತ ಮಾರ್ಗದರ್ಶನದಲ್ಲಿ ವಿಜಯನಗರ ಉಪ-
ವಿಭಾಗದ ಸಹಾಯಕ ಪೊಲೀಸ್ ಕಮಿಷನರವರಾದ ಶ್ರೀ.ಪಿ.ರವಿ ರವರ ನಿರ್ದೇಶನದಲ್ಲಿ
ಗೋವಿಂದರಾಜನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶಿವಪ್ರಸಾದ್ ರವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಬಿ.ದಯಾನಂದ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು