ದಿನಾಂಕ:-15/07/2023 ರಂದು ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ ಜೈಭಾರತ್ ನಗರ ಬಸ್ ನಿಲ್ದಾಣ ಮತ್ತು ಮುಕುಂದ ಢಯೇಟರ್‌ನ ಬಳಿಯ ರಸ್ತೆಯಲ್ಲಿ, ಮೂರು ಜನ ಆರೋಪಿಗಳು ಇಬ್ಬರನ್ನು ಅಡ್ಡಗಟ್ಟಿ ಚಾಕು ತೋರಿಸಿ, ಆವರಿಂದ ಎರಡು ದ್ವಿಚಕ್ರ ವಾಹನಗಳನ್ನು ಮತ್ತು ಒಂದು ಮೊಬೈಲನ್ನು ಕಿತ್ತುಕೊಂಡು ಹೋಗಿರುತ್ತಾರೆಂದು, ಸಿರಾಜುದಾರರು ನೀಡಿದ ದೂರಿನ ಅನ್ವಯ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು, ದಿನಾಂಕ:-18/07/2023 ರಂದು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಸುಮಾರು 1,00,000/- ರೂ ಬೆಲೆಬಾಳುವ 2 ವಿವಿಧ ಕಂಪನಿಯ ದ್ವಿಚಕ್ರ ವಾಹನಗಳನ್ನು, 1 ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ನಗರ, ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ.ಭೀಮಾಶಂಕರ ಗುಳೇದ,
ಐಪಿಎಸ್ ಮತ್ತು ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಉಮಾಶಂಕರ್.ಎ.ಹೆಚ್.ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಪೊಲೀಸ್ ರಾಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಸಂತೋಷ್ ಕುಮಾರ್ ಎಲ್ ರವರ ನೇತೃತ್ವದ ಸಿಬ್ಬಂದಿಯವರ ತಂಡ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು ಮತ್ತು ಪೂರ್ವ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ, ರಮನ್ ಗುಪ್ತಾ ರವರು ಶ್ಲಾಘಿಸಿರುತ್ತಾರೆ.